ನಿತೀಶ್ ಕುಮಾರ್ ಗೆ ಎಂದಿಗೂ ಶಾಶ್ವತವಾಗಿ ಬಾಗಿಲು ಮುಚ್ಚಿಲ್ಲ: ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ
ರಾಜಕೀಯದಲ್ಲಿ ಯಾರಿಗೂ ಶಾಶ್ವತವಾಗಿ ಬಾಗಿಲು ಮುಚ್ಚುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಶುಕ್ರವಾರ ಶುಕ್ರವಾರ ಹೇಳಿದ್ದಾರೆ. ಈ ಮೂಲಕ ಬಿಹಾರ ಮುಖ್ಯಮಂತ್ರಿ ಹಾಗೂ ಮಾಜಿ ಮಿತ್ರ ನಿತೀಶ್...

ಪಾಟ್ನಾ: ರಾಜಕೀಯದಲ್ಲಿ ಯಾರಿಗೂ ಶಾಶ್ವತವಾಗಿ ಬಾಗಿಲು ಮುಚ್ಚುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಶುಕ್ರವಾರ ಶುಕ್ರವಾರ ಹೇಳಿದ್ದಾರೆ. ಈ ಮೂಲಕ ಬಿಹಾರ ಮುಖ್ಯಮಂತ್ರಿ ಹಾಗೂ ಮಾಜಿ ಮಿತ್ರ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ಬಾಗಿಲು ತೆರೆದಿದೆ ಎಂಬ ಸೂಚನೆ ನೀಡಿದ್ದಾರೆ.
ಬಿಜೆಪಿ ಮತ್ತು ಜೆಡಿಯು ಎರಡೂ ಪಕ್ಷಗಳು ಮೂಲಗಳು ನಿತೀಶ್ ಕುಮಾರ್ ಅವರು ಮತ್ತೆ ಎನ್ ಡಿಎ ಜೊತೆ ಕೈಜೋಡಿಸುತ್ತಾರೆ ಎಂದು ಹೇಳುತ್ತಿವೆ. ಆದರೆ ಜೆಡಿಯು ಪ್ರಶ್ನಾತೀತ ನಾಯಕ ನಿತೀಶ್ ಕುಮಾರ್ ಅವರು ಮಾತ್ರ ಇನ್ನೂ ಮರುಮೈತ್ರಿ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ.
ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, "ನಿತೀಶ್ ಕುಮಾರ್ ಅಥವಾ ಜೆಡಿಯುಗೆ ಸಂಬಂಧಿಸಿದಂತೆ, ಬಾಗಿಲು ಎಂದಿಗೂ ಶಾಶ್ವತವಾಗಿ ಮುಚ್ಚುವುದಿಲ್ಲ. ರಾಜಕೀಯದಲ್ಲಿ ಸಮಯ ಬಂದಾಗ ಮುಚ್ಚಿದ ಬಾಗಿಲುಗಳು ತೆರೆದುಕೊಳ್ಳುತ್ತವೆ. ಆದರೆ ಬಾಗಿಲು ತೆರೆಯಬೇಕೇ ಅಥವಾ ಬೇಡವೇ ಎಂಬುದನ್ನು ನಮ್ಮ ಕೇಂದ್ರ ನಾಯಕತ್ವ ನಿರ್ಧರಿಸುತ್ತದೆ" ಎಂದಿದ್ದಾರೆ.
2022 ರಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಂತರ, ಬಿಹಾರ ಮುಖ್ಯಮಂತ್ರಿಗೆ ತನ್ನ ಬಾಗಿಲುಗಳನ್ನು ಶಾಶ್ವತವಾಗಿ ಮುಚ್ಚಲಾಗಿದೆ ಎಂದು ಕೇಸರಿ ಪಕ್ಷ ಹೇಳಿತ್ತು. ಆದರೆ ಇಂಡಿಯಾ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯ ಸ್ಫೋಟಗೊಂಡ ನಂತರ ಮತ್ತೆ ನಿತೀಶ್ ಕುಮಾರ್ ಜೊತೆ ಸರ್ಕಾರ ರಚಿಸಲು ಬಿಜೆಪಿ ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


