ಬಿಹಾರ: ಮಹಾಮೈತ್ರಿಗೆ ನಿತೀಶ್ ವಿದಾಯ: ಜ.28ಕ್ಕೆ ಬಿಜೆಪಿ ಬೆಂಬಲದೊಂದಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ!
ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬಿಹಾರ ರಾಜಕೀಯದಲ್ಲಾದ ದಿಢೀರ್ ಬೆಳವಣಿಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾಂಗ್ರೆಸ್ -ಆರ್ ಜೆಡಿಎಸ್ ಜೊತೆಗಿನ ಮಹಾಮೈತ್ರಿ ಕೂಟ ತೊರೆದು ಬಿಜೆಪಿ ನೇತೃತ್ವದ ಎನ್ ಡಿಎ ಸೇರುವುದು ಬಹುತೇಕ ಖಚಿತವಾಗಿದೆ.

ಪಾಟ್ನಾ: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬಿಹಾರ ರಾಜಕೀಯದಲ್ಲಾದ ದಿಢೀರ್ ಬೆಳವಣಿಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾಂಗ್ರೆಸ್ -ಆರ್ ಜೆಡಿಎಸ್ ಜೊತೆಗಿನ ಮಹಾಮೈತ್ರಿ ಕೂಟ ತೊರೆದು ಬಿಜೆಪಿ ನೇತೃತ್ವದ ಎನ್ ಡಿಎ ಸೇರುವುದು ಬಹುತೇಕ ಖಚಿತವಾಗಿದೆ.
ಜನವರಿ 28 ರಂದು ಬಿಜೆಪಿ ಬೆಂಬಲದೊಂದಿಗೆ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.2024 ರ ಲೋಕಸಭೆ ಚುನಾವಣೆಗೆ ಮುನ್ನ ನಿತೀಶ್ ಕುಮಾರ್ ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಲಿದ್ದಾರೆ ಎಂಬುದು ಖಚಿತವಾಗಿದೆ ಎಂದು ಜೆಡಿ-ಯು ನಾಯಕರೊಬ್ಬರು ಹೇಳಿದ್ದಾರೆ.
ಈ ಮಧ್ಯೆ ಜೆಡಿಯು ತನ್ನ ಎಲ್ಲಾ ನಿಗದಿತ ಕಾರ್ಯಕ್ರಮವನ್ನು ಈ ತಿಂಗಳ ಅಂತ್ಯದವರೆಗೆ ರದ್ದುಗೊಳಿಸಿದೆ. ಪಕ್ಷದ ಎಲ್ಲಾ ಶಾಸಕರು ಶುಕ್ರವಾರ ರಾತ್ರಿಯೊಳಗೆ ಪಾಟ್ನಾಕ್ಕೆ ಬರುವಂತೆ ಸೂಚಿಸಲಾಗಿದೆ. ಈ ಮೂಲಕ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ರಚಿಸಲಾಗಿದ್ದ ಇಂಡಿಯಾ ಮೈತ್ರಿಕೂಟ ವಿಧ್ರಗೊಳುವ ಸಾಧ್ಯತೆ ಹೆಚ್ಚಾಗಿದೆ.
2022 ರಲ್ಲಿ ಎನ್ ಡಿಎಯಿಂದ ಹೊರಬಂದಿದ್ದ ನಿತೀಶ್ ಕುಮಾರ್ ಮಹಾಮೈತ್ರಿಕೂಟ ಸೇರ್ಪಡೆಗೊಂಡಿದ್ದರು. ಇವರಿಗೆ ಕಾಂಗ್ರೆಸ್-ಆರ್ ಜೆಡಿ ಹಾಗೂ ಇತರ ಕಮ್ಯೂನಿಸ್ಟ್ ಪಕ್ಷಗಳು ಸಹಕಾರ ನೀಡಿದ್ದವು. ಆದರೆ, ಕಳೆದ ಕೆಲವು ವಾರಗಳಲ್ಲಿ ನಿತೀಶ್ ಕುಮಾರ್ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪ್ರಧಾನಿ ಮೋದಿ ಅವರನ್ನು ಹೊಗಳಲು ಶುರು ಮಾಡಿದ್ದರು. ಇಂಡಿಯಾ ಮೈತ್ರಿಕೂಟದಲ್ಲಿನ ಸ್ಪಷ್ಟತೆಯ ಕೊರತೆ ಮತ್ತು ಸಂಭಾವ್ಯ ಪ್ರಧಾನಿ ಅಭ್ಯರ್ಥಿ ವಿಷಯವಾಗಿ ತಮ್ಮನ್ನು ಕಡೆಗಣಿಸಿರುವುದರ ಬಗ್ಗೆಯೂ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಿತೀಶ್ ಅವರು ಭಾನುವಾರ ದಾಖಲೆಯ ಏಳನೇ ಬಾರಿ ಬಿಹಾರ ಸಿಎಂ ಆಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಜೆಡಿಯು ಪಕ್ಷಕ್ಕೆ ಬೆಂಬಲ ನೀಡಲಿರುವ ಬಿಜೆಪಿಗೆ ಎರಡು ಉಪ ಮುಖ್ಯಮಂತ್ರಿ ಸ್ಥಾನ ದೊರಕಲಿದೆ. 2020ರ ಬಿಹಾರ ವಿಧಾನಸಭೆ ಚುನಾವಣೆಗೂ ಮುಂಚೆ ಇದ್ದ ಮೈತ್ರಿ ಸರ್ಕಾರದಂತೆ ಸಂಪುಟ ಸಚಿವ ಸ್ಥಾನಗಳ ಹಂಚಿಕೆ ನಡೆಯುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


