ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ: ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ ಅಭಿನಂದನೆ
ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಈ ವ್ಯಕ್ತಿಗಳು ಅದ್ಭುತ ಉದಾಹರಣೆಗಳನ್ನ ಸೃಷ್ಟಿಸಿದ್ದಾರೆ. ಮಾತ್ರವಲ್ಲದೇ ತಮ್ಮ ಸೇವೆಯಿಂದ ರಾಷ್ಟ್ರದ ಘನತೆಯನ್ನ ಹೆಚ್ಚಿದ್ದಾರೆ. ವಿವಿಧ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆ ತರುತ್ತಿರುವ ಸಾಧಕರಿಗೆ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


