ದೇಶ

ತೆಲಂಗಾಣ: ಗಣರಾಜ್ಯೋತ್ಸವ ಸಮಾರಂಭ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರು ಯುವಕರ ಸಾವು

ಗಣರಾಜ್ಯೋತ್ಸವ ಸಮಾರಂಭ ವೇಳೆ ಸಂಭವಿಸಿದ ವಿದ್ಯುತ್ ಸ್ಪರ್ಶದಿಂದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ತೆಲಂಗಾಣ: ಗಣರಾಜ್ಯೋತ್ಸವ ಸಮಾರಂಭ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರು ಯುವಕರ ಸಾವು
ಸಾಂದರ್ಭಿಕ ಚಿತ್ರ
Published On :

ಹೈದರಾಬಾದ್: ಗಣರಾಜ್ಯೋತ್ಸವ ಸಮಾರಂಭ ವೇಳೆ ಸಂಭವಿಸಿದ ವಿದ್ಯುತ್ ಸ್ಪರ್ಶದಿಂದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಎಸ್ಸಿ ವಾಡಾದಲ್ಲಿ ಸಂಭವಿಸಿದ ಘಟನೆಯಲ್ಲಿ ಮತ್ತೊಬ್ಬ ಯುವಕ ಗಾಯಗೊಂಡಿದ್ದಾನೆ. 75ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದೆ.ಮೃತರನ್ನು ವಿಜಯ್ (25) ಮತ್ತು ಅಂಜಿತ್ (35) ಎಂದು ಗುರುತಿಸಲಾಗಿದೆ.

ಮತ್ತೋರ್ವ ಯುವಕ ಚಕ್ರಿ (25) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೀತಕ್ಕ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.