ಬಿಹಾರ: ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಭೂಪೇಶ್ ಬಘೇಲ್ ನೇಮಕ!
ಬಿಹಾರದಲ್ಲಿ ರಾಜಕೀಯ ಬಿರುಗಾಳಿ ಎದ್ದಿರುವಂತೆಯೇ ಭಾರತ ಜೋಡೋ ನ್ಯಾಯ ಯಾತ್ರೆ ಹಾಗೂ ಅಲ್ಲಿ ಪಕ್ಷದ ಚಟುವಟಿಕೆ ನೋಡಿಕೊಳ್ಳಲು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಿಸಿದೆ.

ನವದೆಹಲಿ: ಬಿಹಾರದಲ್ಲಿ ರಾಜಕೀಯ ಬಿರುಗಾಳಿ ಎದ್ದಿರುವಂತೆಯೇ ಭಾರತ ಜೋಡೋ ನ್ಯಾಯ ಯಾತ್ರೆ ಹಾಗೂ ಅಲ್ಲಿ ಪಕ್ಷದ ಚಟುವಟಿಕೆ ನೋಡಿಕೊಳ್ಳಲು ವೀಕ್ಷಕರಾಗಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಿಸಿದೆ.
ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಮರಳಬಹುದು ಎಂಬ ಬಲವಾದ ಸೂಚನೆಗಳ ನಡುವೆ ಬಿಹಾರದಲ್ಲಿ ಅಧಿಕಾರ ರಾಜಕಾರಣ ತೀವ್ರಗೊಂಡಿರುವ ಸಮಯದಲ್ಲಿ ಈ ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಬಿಹಾರದಲ್ಲಿ ರಾಜಕೀಯ ಬಿರುಗಾಳಿ ನಡುವೆ ಆರ್ಜೆಡಿ ಸಭೆ!
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಬಿಹಾರದಲ್ಲಿ 'ಭಾರತ್ ಜೋಡೋ ನ್ಯಾಯ ಯಾತ್ರೆ' ಮತ್ತು ಪಕ್ಷದ ಇತರ ಚಟುವಟಿಕೆಗಳನ್ನು ನೋಡಿಕೊಳ್ಳಲು ಹಿರಿಯ ವೀಕ್ಷಕರಾಗಿ ಬಾಘೇಲ್ ಅವರನ್ನು ನೇಮಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಘಟನೆ ಕೆ ಸಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಜನವರಿ 26 ರಿಂದ 27 ರವರೆಗೆ ಎರಡು ದಿನಗಳ ವಿರಾಮವನ್ನು ಹೊಂದಿದ್ದು, ಪಶ್ಚಿಮ ಬಂಗಾಳದ ಜಲ್ಪೈಗುರಿಯಿಂದ ಪುನರಾರಂಭವಾಗಲಿದೆ. ಇದು ಜನವರಿ 29 ರಂದು ಬಿಹಾರವನ್ನು ಪ್ರವೇಶಿಸುವ ನಿರೀಕ್ಷೆಯಿದೆ ಮತ್ತು ಜನವರಿ 31 ರಂದು ಮಾಲ್ಡಾ ಮೂಲಕ ಮತ್ತೆ ಪಶ್ಚಿಮ ಬಂಗಾಳಕ್ಕೆ ಮರಳುತ್ತದೆ.
ರಾಹುಲ್ ಗಾಂಧಿ ಮಣಿಪುರದಿಂದ ಮುಂಬೈಗೆ 6,700-ಕಿಮೀಗಳಷ್ಟು ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


