ಒಡಿಶಾ: 2 ಬೈಕ್, ಆಟೋಗೆ ಡಿಕ್ಕಿ ಹೊಡೆದ ಕಾರು, ಮೂವರು ಸಾವು- ಭಯಾನಕ ಅಪಘಾತದ ವಿಡಿಯೋ
ಕಾರೊಂದು ಎರಡು ಬೈಕ್ ಮತ್ತು ಆಟೋರಿಕ್ಷಾವನ್ನು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಭಯಾನಕ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಒಡಿಶಾ: ಕಾರೊಂದು ಎರಡು ಬೈಕ್ ಮತ್ತು ಆಟೋರಿಕ್ಷಾವನ್ನು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಭಯಾನಕ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಏಕ ಪಥದ ರಸ್ತೆಯಲ್ಲಿ ವೇಗವಾಗಿ ಬಂದ ಮಹೀಂದ್ರಾ ಸ್ಕಾರ್ಪಿಯೊ ಕಾರು, ಎರಡು ಬೈಕ್ ಹಾಗೂ ಆಟೋಗೆ ಡಿಕ್ಕಿ ಹೊಡೆಯುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಟ್ರಾಕ್ಟರ್ ಗೂ ಕಾರು ಡಿಕ್ಕಿ ಹೊಡೆಯಬೇಕಾಗಿತ್ತು. ಆದರೆ, ಕೂದಲೆಳೆ ಅಂತರದಲ್ಲಿ ಟ್ರಾಕ್ಟರ್ ನಲ್ಲಿದ್ದವರು ಬಚಾವ್ ಆಗಿದ್ದಾರೆ. ಆಟೋ ರಿಕ್ಷಾದಲ್ಲಿ 15 ಪ್ರಯಾಣಿಕರಿದ್ದರು ಎನ್ನಲಾಗಿದೆ ಮಾರಣಾಂತಿಕ ಅಪಘಾತದ ನಂತರ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಬಂಧ ಬಿಜಾಪುರ ಗ್ರಾಮದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


