ಉತ್ತರಪ್ರದೇಶ: ಫರೀದ್‌ಪುರದಲ್ಲಿ ಅಗ್ನಿ ಅವಘಡ: ಸುಟ್ಟ ಸ್ಥಿತಿಯಲ್ಲಿ ದಂಪತಿ, ಮೂವರು ಮಕ್ಕಳ ಮೃತದೇಹ ಪತ್ತೆ!
ಉತ್ತರ ಪ್ರದೇಶದ ಫರೀದ್‌ಪುರದಲ್ಲಿ ತಮ್ಮ ಬಾಡಿಗೆ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬರೇಲಿ: ಉತ್ತರ ಪ್ರದೇಶದ ಫರೀದ್‌ಪುರದಲ್ಲಿ ತಮ್ಮ ಬಾಡಿಗೆ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಘಟನೆ ಶನಿವಾರ ರಾತ್ರಿ ನಡೆದಿದ್ದು, ಭಾನುವಾರ ಬೆಳಗ್ಗೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆ ಬಾಗಿಲು ಹೊಡೆದು ನೋಡಿದಾಗ ಐವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸುಶೀಲ್ ಚಂದ್ರ ಧುಲೆ ಹೇಳಿದರು.
ಮೃತರನ್ನು ಅಜಯ್ ಗುಪ್ತಾ (38), ಅವರ ಪತ್ನಿ ಅನಿತಾ (36), ಅವರ ಮಕ್ಕಳಾದ ದಿವ್ಯಾಂಶ್ (9) ಮತ್ತು ದಕ್ಷ್ (3) ಮತ್ತು ಮಗಳು ದಿವ್ಯಾಂಕ (6) ಎಂದು ಗುರುತಿಸಲಾಗಿದೆ.
ವಿವರವಾದ ತನಿಖೆ ನಡೆಯುತ್ತಿದೆ. ಬೆಂಕಿ ಹೇಗೆ ಸಂಭವಿಸಿತು ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಎಸ್‌ಎಸ್‌ಪಿ ಹೇಳಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದು, ಶವಸಂಸ್ಕಾರದ ಎಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


