ದೇಶ

ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ

ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗಿಂತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ
ಸುಧೀಂದ್ರ ಕುಲಕರ್ಣಿ
Published On :

ಮುಂಬೈ: ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗಿಂತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

ಈ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆಗೆ ಬದ್ಧವಾಗಿದ್ದು, ಕ್ಷಮೆಯಾಚಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದಿದ್ದಾರೆ.  ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ರಚಿಸಿದವರು ಎಂದು ಭಾವಿಸಲಾಗಿದೆ. ಆದರೆ,  ಈ ಬಗ್ಗೆ ಸಂಶೋಧನೆ ಮಾಡಿದ್ದು, ಇತಿಹಾಸದ ವಾಸ್ತವಾಂಶ ಪರಿಶೀಲಿಸಿದರೆ ಅದು ಸುಳ್ಳು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ. 

ಈ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಸುಧೀಂದ್ರ ಕುಲಕರ್ಣಿ ಬರೆದಿದ್ದ ಲೇಖನದ ಲಿಂಕ್ ನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದರು. ನಂತರ ಅದನ್ನು ಡಿಲೀಟ್ ಮಾಡಿದ್ದರು. ಲೇಖನದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ, ದಲಿತರು ಹಾಗೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಟೀಕಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.