ಮಹಾಘಟಬಂಧನ ಮೈತ್ರಿ ಮುರಿದು ಸಿಎಂ ಸ್ಥಾನಕ್ಕೆ ರಾಜೀನಾಮೆ: ನಿತೀಶ್ ಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ
ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಇಂದು ಭಾನುವಾರ ಸಂಜೆ ವೇಳೆಗೆ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಬಹುತೇಕ ನಿಚ್ಛಳವಾಗಿದೆ.

ಪಾಟ್ನಾ: ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಇಂದು ಭಾನುವಾರ ಸಂಜೆ ವೇಳೆಗೆ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಬಹುತೇಕ ನಿಚ್ಛಳವಾಗಿದೆ.
ಇಂದು ಬೆಳಗ್ಗೆ ರಾಜ್ಯಪಾಲ ರಾಜೇಂದ್ರ ವಿ ಅರ್ಲೇಕರ್ ಅವರಿಗೆ ನಿತೀಶ್ ಕುಮಾರ್ ಅವರು ರಾಜೀನಾಮೆ ಪತ್ರ ಸಲ್ಲಿಸಿದರು. ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲರು ಸೂಚಿಸಿದರು.
ನಿತೀಶ್ ಕುಮಾರ್ ಅವರಿಗೆ ಪ್ರಧಾನಿ ಅಭಿನಂದನೆ: ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ನಿತೀಶ್ ಕುಮಾರ್ ಅವರು ರಾಜ್ಯಪಾಲರ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ನಿತೀಶ್ ಕುಮಾರ್ ಅವರಿಗೆ ಕರೆ ಮಾಡಿ ಎನ್ ಡಿಎ ಮೈತ್ರಿಕೂಟದ ಭಾಗವಾಗುತ್ತಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ.
ಹೊಸ ಸರ್ಕಾರ ರಚನೆಯಾಗುವವರೆಗೂ ನಿತೀಶ್ ಕುಮಾರ್ ಅವರಿಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


