ತಮಿಳುನಾಡು: ಸಿಮೆಂಟ್ ಲಾರಿ, ಕಾರು ನಡುವೆ ಡಿಕ್ಕಿ, ಆರು ಮಂದಿ ದುರ್ಮರಣ- ಭೀಕರ ಅಪಘಾತದ ವಿಡಿಯೋ
ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ.

ಚೆನ್ನೈ: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ.
ಅಪಘಾತದಿಂದಾಗಿ ಪುಲಿಯಂಗುಡಿದ ಐವರು ನಿವಾಸಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಚೊಕ್ಕಂಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರೆಲ್ಲರೂ ಪುಲಿಯಂಗುಡಿಯ ಭಗವತಿ ಅಮ್ಮನ್ ದೇವಾಲಯ ಪ್ರದೇಶದವರಾಗಿದ್ದು, ಜನವರಿ 27 ರಂದು ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಲು ತೆರಳಿದ್ದರು ಎನ್ನಲಾಗಿದೆ.
ಉತ್ಸವದಲ್ಲಿ ಪಾಲ್ಗೊಂಡ ನಂತರ ಕುಟ್ರಾಲಂ ಜಲಪಾತ ವೀಕ್ಷಿಸಿ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ನಿದ್ರೆಯ ಮಂಪರಿನಲ್ಲಿದ್ದ ಕಾರು ಚಾಲಕ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಲಾರಿಯಡಿ ಸಿಲುಕಿದ ಕಾರು ಕೆಲ ಅಡಿಗಳವರೆಗೆ ಪಲ್ಟಿಯಾಗಿದೆ ಎನ್ನಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


