Ayodhya Ram Mandir ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೌಲ್ವಿ ವಿರುದ್ಧ ಫತ್ವಾ ಜಾರಿ!
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರುವೊಬ್ಬರ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.

ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರುವೊಬ್ಬರ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.
ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರು ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್‌ನ ಮುಖ್ಯ ಇಮಾಮ್ ಡಾ. ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.
ಇಲ್ಯಾಸಿ ಅವರು ತನ್ನ ವಿರುದ್ಧ ‘ಫತ್ವಾ’ ಹೊರಡಿಸಿರುವುದನ್ನು ಖಚಿತಪಡಿಸಿದ್ದು, “ಮುಖ್ಯ ಇಮಾಮ್ ಆಗಿ, ನಾನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ನಾನು ಎರಡು ದಿನ ಆಲೋಚಿಸಿ ನಂತರ ದೇಶಕ್ಕಾಗಿ ಸೌಹಾರ್ದತೆಗಾಗಿ ಅಯೋಧ್ಯೆಗೆ ಹೋಗಲು ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.
“ನಿನ್ನೆ ಫತ್ವಾ ಹೊರಡಿಸಲಾಗಿದೆ, ಆದರೆ ಜನವರಿ 22 ರ ಸಂಜೆಯಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದೇನೆ, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ನನ್ನನ್ನು ಪ್ರೀತಿಸುವವರು, ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ. ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ಥಾನಕ್ಕೆ ಹೋಗಬೇಕು. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ, ನಾನು ಯಾವುದೇ ಅಪರಾಧ ಮಾಡಿಲ್ಲ. ನಾನು ಕ್ಷಮೆಯಾಚಿಸುವುದಿಲ್ಲ ಅಥವಾ ರಾಜೀನಾಮೆ ನೀಡುವುದಿಲ್ಲ, ಅವರು ಏನು ಬೇಕಾದರೂ ಮಾಡಬಹುದು”ಎಂದು ಇಲ್ಯಾಸಿ ಆತಂಕ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


