ದೇಶ

ನಾನು ರಾಮಾಯಣ, ಕುರಾನ್, ಬೈಬಲ್ ಅನ್ನು ಅನುಸರಿಸುತ್ತೇನೆ, ಆದರೆ...: ಮಮತಾ ಬ್ಯಾನರ್ಜಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಮತ ಹಾಕದಿದ್ದರೆ ಕೇಂದ್ರ ತನಿಖಾ ಸಂಸ್ಥೆಗಳ ನಿಮ್ಮ ಮನೆಗಳಿಗೆ ಕಳುಹಿಸುವುದಾಗಿ ಬಿಜೆಪಿ ಬೆದರಿಕೆ ಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...

ನಾನು ರಾಮಾಯಣ, ಕುರಾನ್, ಬೈಬಲ್ ಅನ್ನು ಅನುಸರಿಸುತ್ತೇನೆ, ಆದರೆ...: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Published On :

ಕೂಚ್ ಬೆಹಾರ್‌: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಮತ ಹಾಕದಿದ್ದರೆ ಕೇಂದ್ರ ತನಿಖಾ ಸಂಸ್ಥೆಗಳ ನಿಮ್ಮ ಮನೆಗಳಿಗೆ ಕಳುಹಿಸುವುದಾಗಿ ಬಿಜೆಪಿ ಬೆದರಿಕೆ ಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಆರೋಪಿಸಿದ್ದಾರೆ.

ಪೌರತ್ವ(ತಿದ್ದುಪಡಿ) ಕಾಯಿದೆ ಅಥವಾ ಸಿಎಎಯಿಂದ "ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು" ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಟಿಎಂಸಿ ಮುಖ್ಯಸ್ಥೆ ಕೂಚ್ ಬೆಹಾರ್‌ನ ಸ್ಥಳೀಯರಿಗೆ, ವಿಶೇಷವಾಗಿ ರಾಜ್‌ಬನ್‌ಶಿಗಳಿಗೆ ಕರೆ ನೀಡಿದ್ದಾರೆ.

"ಬಿಜೆಪಿ, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಚುನಾವಣೆ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ... ಕೇಸರಿ ಪಕ್ಷಕ್ಕೆ ಮತ ಹಾಕದಿದ್ದರೆ ಜಾರಿ ನಿರ್ದೇಶನಾಲಯ(ಇಡಿ) ಮತ್ತು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯನ್ನು ನಿಮ್ಮ ಮನೆಗೆ ಕಳುಹಿಸುವುದಾಗಿ ಫೋನ್ ಮೂಲಕ ಜನರಿಗೆ ಬೆದರಿಕೆ ಹಾಕುತ್ತಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಯಾವುದೇ ನಿರ್ದಿಷ್ಟ ದೇವರನ್ನು ಪೂಜಿಸಲು ಬಿಜೆಪಿಯ ಅನುಮತಿ ಬೇಕಿಲ್ಲ ಎಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ನಾನು ರಾಮಾಯಣ, ಕುರಾನ್, ಬೈಬಲ್ ಮತ್ತು ಗುರು ಗ್ರಂಥ ಸಾಹಿಬ್ ಅನ್ನು ಅನುಸರಿಸುತ್ತೇನೆ... ನಾನು ಬಡವರ ಮನೆಗೆ ಭೇಟಿ, ಅಲ್ಲಿ ಹೊರಗಿನಿಂದ ತಂದ ಆಹಾರವನ್ನು ತಿನ್ನುವಂತಹ ನಾಟಕ ಮಾಡುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಲೋಕಸಭೆ ಚುನಾವಣೆಗೆ ಮುನ್ನ ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರ ಮತ್ತೆ ಸಿಎಎ ವಿಷಯವನ್ನು ಪ್ರಸ್ತಾಪಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 

ಇದಕ್ಕು ಮುನ್ನ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಶಾಂತನು ಠಾಕೂರ್ ಅವರು ಮುಂದಿನ ಏಳು ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿಗೆ ತರಲಾಗುವುದು ಎಂದು ಹೇಳಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮತಕ್ಕಾಗಿ ಕೇಸರಿ ಪಕ್ಷ ಮತ್ತೆ "ಸಿಎಎ" ಪ್ರಸ್ತಾಪಿಸಲು ಪ್ರಾರಂಭಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.