ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರನಿಗೆ ಗಾಯ
ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಅಲ್ವಾರ್‌ನಲ್ಲಿ ಅಪಘಾತಕ್ಕೀಡಾಗಿದೆ.

ನವದೆಹಲಿ: ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಅಲ್ವಾರ್‌ನಲ್ಲಿ ಅಪಘಾತಕ್ಕೀಡಾಗಿದೆ.
ಭೀಕರ ಅಪಘಾತದಲ್ಲಿ ಮನ್ವೇಂದ್ರ ಸಿಂಗ್ ಅವರ ಪತ್ನಿ ಸಾವನ್ನಪ್ಪಿದ್ದಾರೆ. ಮಾಜಿ ಸಂಸದ ಮನ್ವೇಂದ್ರ ಸಿಂಗ್ ಮತ್ತು ಅವರ ಪುತ್ರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮನ್ವೇಂದ್ರ ಸಿಂಗ್ ಮತ್ತು ಅವರ ಕುಟುಂಬ ದೆಹಲಿಯಿಂದ ಜೈಪುರಕ್ಕೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಾರು ಗೋಡೆಗೆ ಡಿಕ್ಕಿ ಹೊಡೆದಿದೆ.
ಮನ್ವೇಂದ್ರ ಸಿಂಗ್ ಅವರು 2004 ಮತ್ತು 2009 ರ ನಡುವೆ ಲೋಕಸಭೆಯ ಸದಸ್ಯರಾಗಿದ್ದರು ಮತ್ತು ರಾಜಸ್ಥಾನದ ಬಾರ್ಮರ್-ಜೈಸಲ್ಮೇರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


