ಮಹಾರಾಷ್ಟ್ರ: ದರ್ಗಾಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಐವರು ಯುವಕರು ದುರ್ಮರಣ
ಮಹಾರಾಷ್ಟ್ರದ ದಿಗಾವಾಲಾದಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೆಲಂಗಾಣದ ಐವರು ಯುವಕರು ಸಾವನ್ನಪ್ಪಿದ್ದಾರೆ.

ದಿಗಾವಾಲಾ: ಮಹಾರಾಷ್ಟ್ರದ ದಿಗಾವಾಲಾದಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೆಲಂಗಾಣದ ಐವರು ಯುವಕರು ಸಾವನ್ನಪ್ಪಿದ್ದಾರೆ.
ಕಳೆದ ಭಾನುವಾರ ನಾರಾಯಣಖೇಡ್‌ನಿಂದ ನಾಲ್ವರು ಮತ್ತು ಕಾಮರೆಡ್ಡಿ ಜಿಲ್ಲೆಯ ಬನ್ಸ್ವಾರಾದಿಂದ ಇಬ್ಬರು ಮುಂಬೈಗೆ ಭೇಟಿ ನೀಡಲು ತೆರಳಿದ್ದರು. ಕಾರಿನ ಸ್ಟೇರಿಂಗ್ ಮೇಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ನಂತರ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೃತರಲ್ಲಿ ಮೆಹಬೂಬ್ ಖುರೇಷಿ, ಫಿರೋಜ್ ಖುರೇಷಿ, ರಫೀಕ್ ಖುರೇಷಿ, ಫಿರೋಜ್ ಖುರೇಷಿ ಮತ್ತು ಮಜೀದ್ ಪಟೇಲ್ ಸೇರಿದ್ದಾರೆ. ಸೈಯದ್ ಅಮರ್ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಮರ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಎಲ್ಲಾ ಆರು ಯುವಕರು 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರು.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಆರು ಕುಟುಂಬಗಳು ಆಘಾತಕ್ಕೆ ಒಳಗಾಗಿವೆ. ಕೂಡಲೇ ದಿಗವಾಲ್‌ಗೆ ತೆರಳುತ್ತಿದ್ದು ಮೃತದೇಹಗಳನ್ನು ಸ್ವಗ್ರಾಮಕ್ಕೆ ತರುವ ಪ್ರಯತ್ನ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



