ದೇಶ

ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೆನ್ ರಾಜೀನಾಮೆ; ಹೊಸ ಸರ್ಕಾರ ರಚನೆಗೆ ಹಕ್ಕುಮಂಡಿಸಿದ ಹೇಮಂತ್ ಸೊರೆನ್

ಚಂಪೈ ಸೊರೆನ್ ರಾಜಿನಾಮೆ ಬೆನ್ನಲೇ ಹೇಮಂತ್ ಸೊರೆನ್ ನೂತನ ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ.

ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೆನ್ ರಾಜೀನಾಮೆ; ಹೊಸ ಸರ್ಕಾರ ರಚನೆಗೆ ಹಕ್ಕುಮಂಡಿಸಿದ ಹೇಮಂತ್ ಸೊರೆನ್
ರಾಜ್ಯಪಾಲರಿಗೆ ರಾಜಿನಾಮೆ ಪತ್ರ ನೀಡಿದ ಚಂಪೈ ಸೊರೆನ್
Published On :

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದ ಚಂಪೈ ಸೊರೆನ್ ತಮ್ಮ ರಾಜಿನಾಮೆ ಪತ್ರವನ್ನು ನೀಡಿದರು.

ಚಂಪೈ ಸೊರೆನ್ ರಾಜಿನಾಮೆ ಬೆನ್ನಲೇ ಹೇಮಂತ್ ಸೊರೆನ್ ನೂತನ ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಾಧ್ಯಕ್ಷ ಹಾಗೂ ಸಿಎಂ ಆಗಿದ್ದ ಹೇಮಂತ್ ಸೊರೆನ್ ಅವರನ್ನು ಬಂಧಿಸಲಾಗಿತ್ತು. ಹೇಮಂತ್ ಸೊರೆನ್ ರಾಜಿನಾಮೆ ಬಳಿಕ ಚಂಪೈ ಸೊರೆನ್ ಅವರನ್ನು ಜಾರ್ಖಂಡ್ ಸಿಎಂ ಮಾಡಲಾಯಿತು.

ಇದೀಗ ಹೇಮಂತ್ ಸೋರೆನ್‌ಗೆ ಜಾಮೀನು ಸಿಕ್ಕಿದೆ. ಜೈಲಿನಿಂದ ಹೊರಬಂದಿರುವ ಅವರು ಮೂರನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಬಹುದು. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಾಧ್ಯಕ್ಷ ಹೇಮಂತ್ ಸೊರೆನ್ ಅವರು ತಮ್ಮ ಪಕ್ಷದ ನೇತೃತ್ವದ ಮೈತ್ರಿಕೂಟದ ಶಾಸಕರ ಒಮ್ಮತದ ನಂತರ ಮೂರನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮರಳುವ ಸಾಧ್ಯತೆಯಿದೆ.

ಚಂಪೈ ಸೊರೆನ್ ಅವರ ಇಂದು ರಾಂಚಿ ನಿವಾಸದಲ್ಲಿ ಆಡಳಿತಾರೂಢ ಮೈತ್ರಿಕೂಟದ ಶಾಸಕರ ನಡುವೆ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್‌ನ ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಮತ್ತು ರಾಜ್ಯಾಧ್ಯಕ್ಷ ರಾಜೇಶ್ ಠಾಕೂರ್ ಉಪಸ್ಥಿತರಿದ್ದರು. ಇವರಲ್ಲದೆ ಹೇಮಂತ್ ಸೋರೆನ್ ಸಹೋದರ ಬಸಂತ್ ಮತ್ತು ಪತ್ನಿ ಕಲ್ಪನಾ ಕೂಡ ಉಪಸ್ಥಿತರಿದ್ದರು. ಹೇಮಂತ್ ಸೊರೇನ್ ಮತ್ತೆ ಮುಖ್ಯಮಂತ್ರಿಯಾಗಲು ಮತ್ತೆ ಒಪ್ಪಿಗೆ ಸೂಚಿಸಲಾಯಿತು.

ಹೇಮಂತ್ ಪ್ರಮಾಣ ವಚನ ಸ್ವೀಕರಿಸಿದರೆ ಜಾರ್ಖಂಡ್ ನ 13ನೇ ಮುಖ್ಯಮಂತ್ರಿಯಾಗಲಿದ್ದಾರೆ. ಸುಮಾರು ಐದು ತಿಂಗಳ ಜೈಲಿನಲ್ಲಿ ಕಳೆದ ನಂತರ, ಜಾರ್ಖಂಡ್ ಹೈಕೋರ್ಟ್ ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿದ್ದು ಜೂನ್ 28ರಂದು ಜೈಲಿನಿಂದ ಹೊರಬಂದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.