ನೀಟ್ ಪರೀಕ್ಷೆಯಿಂದ ತಮಿಳುನಾಡಿಗೆ ವಿನಾಯಿತಿ ನೀಡಿ: ಕೇಂದ್ರ ಸರ್ಕಾರಕ್ಕೆ ನಟ ವಿಜಯ್ ಆಗ್ರಹ
ಈ ಬಾರಿಯ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಹಾರದ ಸುದ್ದಿಯು ದೇಶದಲ್ಲಿ ನೀಟ್‌ನ ಅಗತ್ಯವೇ ಇಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟಿದೆ ಎಂದರು.

ಚೆನ್ನೈ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯ ಹಗರಣ ದೇಶಾದ್ಯಂತ ಭಾರೀ ಚರ್ಚೆ ಹುಟ್ಟಾಕ್ಕಿದೆ. ಮೊದಲ ಬಾರಿಗೆ ನೀಟ್ ವಿರುದ್ಧ ದನಿ ಎತ್ತಿದ ಖ್ಯಾತ ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ವಿಜಯ್ ಅವರು, ನೀಟ್ ನಿಂದ ತಮಿಳುನಾಡಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನೀಟ್ ಪರೀಕ್ಷೆಯು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ವಿರುದ್ಧವಾಗಿದೆ. ಈ ಬಾರಿಯ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಹಾರದ ಸುದ್ದಿಯು ದೇಶದಲ್ಲಿ ನೀಟ್‌ನ ಅಗತ್ಯವೇ ಇಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟಿದೆ ಎಂದರು.
ತಮಿಳಗ ವೆಟ್ರಿ ಕಳಗಂ ಪಕ್ಷದ ವತಿಯಿಂದ ಆಯೋಜಿಸಿದ್ದ ಎರಡನೇ ವಾರ್ಷಿಕ ಶಿಕ್ಷಣ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ವಿಜಯ್, ನೀಟ್ ವಿರುದ್ಧ ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವುದಾಗಿ ಹೇಳಿದರು. ಅಲ್ಲದೆ ಕೇಂದ್ರ ಸರ್ಕಾರ ತಮಿಳುನಾಡಿನ ಜನರ ಭಾವನೆಗಳನ್ನು ಗೌರವಿಸಬೇಕು ಮತ್ತು ರಾಜ್ಯಕ್ಕೆ NEET ನಿಂದ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.
ನೀಟ್ ಪರೀಕ್ಷೆಯಲ್ಲಿ ಜನರು ನಂಬಿಕೆ ಕಳೆದುಕೊಂಡಿದ್ದಾರೆ. ದೇಶಕ್ಕೆ ನೀಟ್ ಅಗತ್ಯವಿಲ್ಲ. ನೀಟ್‌ನಿಂದ ವಿನಾಯಿತಿಯೊಂದೇ ಪರಿಹಾರ ಎಂದು ದಳಪತಿ ಹೇಳಿದ್ದಾರೆ.
ಶಿಕ್ಷಣವನ್ನು ಸಾಮಾನ್ಯ ಪಟ್ಟಿಯಿಂದ ರಾಜ್ಯ ಪಟ್ಟಿಗೆ ತರಬೇಕು. ನೀಟ್ ಪರೀಕ್ಷೆಯಿಂದಾಗಿ ತಮಿಳುನಾಡಿನಲ್ಲಿ ಹೆಚ್ಚಿನ ಸಂಖ್ಯೆಯ ಬಡ, ಅರ್ಹ ಮತ್ತು ಅಂಚಿನಲ್ಲಿರುವ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ವಿಜಯ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



