ದೇಶ

ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಸಂಜೆ 5 ಗಂಟೆಗೆ ಹೇಮಂತ್ ಸೋರೆನ್ ಪ್ರಮಾಣ

ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಇಂದು ಹೇಮಂತ್ ಸೊರೆನ್ ಅವರನ್ನು ನಿಯೋಜಿತ ಮುಖ್ಯಮಂತ್ರಿಯಾಗಿ ನೇಮಿಸಿದ್ದು, ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ.

ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಸಂಜೆ 5 ಗಂಟೆಗೆ ಹೇಮಂತ್ ಸೋರೆನ್ ಪ್ರಮಾಣ
ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ - ಹೇಮಂತ್ ಸೊರೆನ್
Published On :

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಇಂದು ಹೇಮಂತ್ ಸೊರೆನ್ ಅವರನ್ನು ನಿಯೋಜಿತ ಮುಖ್ಯಮಂತ್ರಿಯಾಗಿ ನೇಮಿಸಿದ್ದು, ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ.

ಜುಲೈ 4 ರಂದು ಸಂಜೆ 5 ಗಂಟೆಗೆ ಸೊರೆನ್ ಅವರು ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕು ಮುನ್ನ ಜುಲೈ 7 ರಂದು ಸೊರೆನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ನಂತರ ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಜೆಎಂಎಂ ಮೂಲಗಳು ತಿಳಿಸಿವೆ.

ರಾಜಭವನದ ಮೂಲಗಳ ಪ್ರಕಾರ, ರಾಜ್ಯಪಾಲರು ಸೊರೆನ್ ಅವರನ್ನು 12:30 ಕ್ಕೆ ರಾಜಭವನಕ್ಕೆ ಕರೆದು ಸರ್ಕಾರ ರಚಿಸಲು ಆಹ್ವಾನಿಸಿದರು. ಹೇಮಂತ್ ಸೊರೆನ್ ಅವರ ಪತ್ನಿ ಮತ್ತು ಶಾಸಕಿ ಕಲ್ಪನಾ ಸೊರೆನ್, ಸಿಪಿಐಎಂಎಲ್ ಶಾಸಕ ವಿನೋದ್ ಸಿಂಗ್, ಆರ್‌ಜೆಡಿ ಶಾಸಕ ಸತ್ಯಾನಂದ ಭೋಕ್ತಾ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಜೊತೆಗಿದ್ದರು.

ರಾಜ್ಯಪಾಲರಿಂದ ಆಹ್ವಾನ ಸ್ವೀಕರಿಸಿದ ನಂತರ ಸಾಮಾಜಿಕ ಮಾಧ್ಯಮ X ನಲ್ಲಿ ಸಂತೋಷ ವ್ಯಕ್ತಪಡಿಸಿದ ಕಲ್ಪನಾ ಸೊರೆನ್, ಅಂತಿಮವಾಗಿ ಪ್ರಜಾಪ್ರಭುತ್ವವು ಗೆದ್ದಿದೆ ಎಂದು ಹೇಳಿದ್ದಾರೆ.

"31 ಜನವರಿ 2024 ರಂದು ಪ್ರಾರಂಭವಾದ ಅನ್ಯಾಯವು ಈಗ ನಿಜವಾದ ಅರ್ಥದಲ್ಲಿ ನ್ಯಾಯವನ್ನು ಪಡೆಯುವ ಸಮಯ ಪ್ರಾರಂಭಿಸಿದೆ" ಎಂದು ಕಲ್ಪನಾ ಸೊರೆನ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.