ದೇಶ

ಹತ್ರಾಸ್ ಕಾಲ್ತುಳಿತ: ದೆಹಲಿಯಲ್ಲಿ ಪೊಲೀಸರೆದುರು ಮುಖ್ಯ ಆರೋಪಿ ಶರಣು

ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ಹತ್ರಾಸ್ ಕಾಲ್ತುಳಿತ: ದೆಹಲಿಯಲ್ಲಿ ಪೊಲೀಸರೆದುರು ಮುಖ್ಯ ಆರೋಪಿ ಶರಣು
ಭೋಲೆ ಬಾಬಾ ಆಶ್ರಮ — online desk
Published On :

ದೆಹಲಿ: ಜು.2 ರಂದು ಹತ್ರಾಸ್ ಸತ್ಸಂಗದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಪ್ರಮುಖ ಆರೋಪಿ ದೇವ್ ಪ್ರಕಾಶ್ ಮಧುಕರ್ ದೆಹಲಿಯಲ್ಲಿ ಪೊಲೀಸರೆದುರು ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ.

ಮಧುಕರ್ ಈ ಸತ್ಸಂಗದ ಮುಖ್ಯ ಸೇವಾದಾರರಾಗಿದ್ದರು, ಎಫ್ಐಆರ್ ನಲ್ಲಿ ಈತನ ಹೆಸರನ್ನು ಮಾತ್ರ ದಾಖಲಿಸಲಾಗಿದೆ.

ಮಧುಕರ್ ಅವರ ವಕೀಲ ಎಪಿ ಸಿಂಗ್ ವೀಡಿಯೋ ಸಂದೇಶವೊಂದನ್ನು ಪ್ರಕಟಿಸಿದ್ದು, ತಮ್ಮ ಕಕ್ಷಿದಾರರು ದೆಹಲಿಯಲ್ಲಿ ಶರಣಾಗಿದ್ದಾರೆ ಎಂದು ಹೇಳಿದ್ದಾರೆ. ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ಗುರುವಾರದವರೆಗೆ, ಕಾಲ್ತುಳಿತ ನಡೆದ ಸೂರಜ್‌ಪಾಲ್ ಅಲಿಯಾಸ್ ನಾರಾಯಣ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಅವರ ಸತ್ಸಂಗದ ಸಂಘಟನಾ ಸಮಿತಿಯ ಸದಸ್ಯರಾಗಿದ್ದ ಇಬ್ಬರು ಮಹಿಳಾ ಸ್ವಯಂಸೇವಕರು ಸೇರಿದಂತೆ 6 ಜನರನ್ನು ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಏತನ್ಮಧ್ಯೆ, ಹತ್ರಾಸ್ ಕಾಲ್ತುಳಿತದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಸರ್ಕಾರದ ವಿಶೇಷ ತನಿಖಾ ತಂಡವು ಇದುವರೆಗೆ 90 ಜನರ ಹೇಳಿಕೆಗಳನ್ನು ದಾಖಲಿಸಿದೆ ಎಂದು ಎಸ್‌ಐಟಿ ಮುಖ್ಯಸ್ಥ ಅನುಪಮ್ ಕುಲಶ್ರೇಷ್ಠ ಶುಕ್ರವಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.