ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಜುಲೈ 15ರವರೆಗೆ ವಿಸ್ತರಣೆ
ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್ 9ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ನವದೆಹಲಿ: ದೆಹಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.
ವಿಶೇಷ ನ್ಯಾಯಾಧೀಶೆ ಕಾವೇರಿ ಬಾವೇಜಾ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು.
ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್ 9ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶುಕ್ರವಾರ 9ನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ವಿನೋದ್ ಚೌಹಾನ್ ಎನ್ನುವ ವ್ಯಕ್ತಿಯನ್ನು ಆರೋಪಿ ಎಂದು ಹೆಸರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಕರಣದ ತನಿಖೆಯ ಭಾಗವಾಗಿ ಚೌಹಾನ್ ಅವರನ್ನು ಮೇ ತಿಂಗಳಲ್ಲಿ ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್, ಬಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ, ಉದ್ಯಮಿಗಳು ಸೇರಿದಂತೆ ಹಲವರನ್ನು ಬಂಧಿಸಿದ್ದು, ಚೌಹಾನ್ ಈ ಸಂಬಂಧ ಬಂಧನಕ್ಕೊಳಗಾದ 18ನೇ ಆರೋಪಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



