ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ: ವೈದ್ಯರು
ರಾಯ್ ಅವರು ಇನ್ನೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ.

ಕೋಲ್ಕತ್ತಾ: ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ರಾಯ್ ಅವರು ಇನ್ನೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ. ನಮ್ಮ ವೈದ್ಯರು ಅವರ ಆರೋಗ್ಯದ ಮೇಲೆ 24 ಗಂಟೆ ತೀವ್ರ ನಿಗಾ ವಹಿಸಿದ್ದಾರೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದು,
ಅವರು 2017 ರಲ್ಲಿ ಬಿಜೆಪಿ ಸೇರಿದ್ದರು ಮತ್ತು 2021 ರ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದ ಟಿಕೆಟ್‌ನಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಆದಾಗ್ಯೂ, ಅವರು ನಂತರ ಟಿಎಂಸಿಗೆ ಮರಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



