ದೇಶ

ಸೂರತ್ ನಲ್ಲಿ 6 ಅಂತಸ್ತಿನ ವಸತಿ ಕಟ್ಟಡ ಕುಸಿತ: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

"ಕಟ್ಟಡದಲ್ಲಿ ನಾಲ್ಕರಿಂದ 5 ಫ್ಲಾಟ್ ಗಳಲ್ಲಿ ಜನರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಇನ್ನೂ ನಾಲ್ಕರಿಂದ 5 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ- ಜಿಲ್ಲಾಧಿಕಾರಿ ಮಾಹಿತಿ

ಸೂರತ್ ನಲ್ಲಿ 6 ಅಂತಸ್ತಿನ ವಸತಿ ಕಟ್ಟಡ ಕುಸಿತ: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
Officials and others during a rescue operation after a building collapse, in Surat district, Saturday, July 6, 2024
Published On :

ಗುಜರಾತ್ ನ ಸೂರತ್ ನಗರದಲ್ಲಿ 6 ಅಂತಸ್ತಿನ ವಸತಿ ಕಟ್ಟಡ ಕುಸಿತವಾಗಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ ಇದೆ.

ಅವಶೇಷಗಳಡಿ ಸಿಲುಕಿದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದ್ದು, ಶೋಧ- ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೂರತ್ ಜಿಲ್ಲಾ ಅಧಿಕಾರಿ ಸೌರಭ್ ಪರ್ಧಿ ಹೇಳಿದ್ದಾರೆ.

"ಕಟ್ಟಡದಲ್ಲಿ ನಾಲ್ಕರಿಂದ 5 ಫ್ಲಾಟ್ ಗಳಲ್ಲಿ ಜನರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಇನ್ನೂ ನಾಲ್ಕರಿಂದ 5 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, ಮುಂದಿನ ಕೆಲವು ಗಂಟೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಳ್ಳಬಹುದು" ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.