ದೇಶ

ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದ ಮೊಯಿತ್ರಾ, 'ತನ್ನ ಬಾಸ್ ನ ಪೈಜಾಮವನ್ನು ಹಿಡಿದುಕೊಳ್ಳುವಲ್ಲಿ ನಿರತಳಾಗಿದ್ದಾರೆ' ಎಂದು ಬರೆದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ನಂತರ ತಮ್ಮ ಫೋಸ್ಟ್ ನ್ನು ಡಿಲೀಟ್ ಮಾಡಿದ್ದರು.

ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು
ಮಹುವಾ ಮೊಯಿತ್ರಾ
Published On :

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಹೇಳಿಕೆ ಫೋಸ್ಟ್ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಜುಲೈ 4 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ರೇಖಾ ಶರ್ಮಾ ಆಗಮಿಸುತ್ತಿರುವುದನ್ನು ತೋರಿಸುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದ ಮೊಯಿತ್ರಾ, 'ತನ್ನ ಬಾಸ್ ನ ಪೈಜಾಮವನ್ನು ಹಿಡಿದುಕೊಳ್ಳುವಲ್ಲಿ ನಿರತಳಾಗಿದ್ದಾರೆ' ಎಂದು ಬರೆದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ನಂತರ ತಮ್ಮ ಫೋಸ್ಟ್ ನ್ನು ಡಿಲೀಟ್ ಮಾಡಿದ್ದರು. ಮೂಲ ಫೋಸ್ಟ್ ನಲ್ಲಿ ಒಬ್ಬ ವ್ಯಕ್ತಿ ಕೊಡೆ ಹಿಡಿದುಕೊಂಡು ರೇಖಾ ಶರ್ಮಾ ಅವರ ಹಿಂದೆ ನಡೆಯುವುದನ್ನು ಕಾಣಬಹುದಾಗಿದೆ.

ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 79ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದ ಕೆಲಸ, ಸನ್ನೆ ಅಥವಾ ಕೃತ್ಯಕ್ಕೆ ಸಂಬಂಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.