ದೇಶ

NEET ತನಿಖೆ: ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ

ಮೇ 5 ರಂದು ನಡೆದ ಪರೀಕ್ಷೆಯನ್ನು ಎದುರಿಸಿದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗುವುದರಿಂದ ನಡೆದಿರುವ ಪರೀಕ್ಷೆಗಳನ್ನು ರದ್ದುಗೊಳಿಸಬಾರದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ

NEET ತನಿಖೆ: ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ
ಸುಪ್ರೀಂ ಕೋರ್ಟ್ — online desk
Published On :

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಇಂದು NEET ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತ ಅರ್ಜಿಗಳ ವಿಚಾರಣ ನಡೆಸಲಿದೆ.

ಎನ್ಇಇಟಿ-ಯುಜಿ (NEET-UG) ಪರೀಕ್ಷೆ ಅಕ್ರಮದ ಸಂಬಂಧ 35 ಕ್ಕೂ ಹೆಚ್ಚು ಅರ್ಜಿದಾರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ ಕೆಲವರು ಪರೀಕ್ಷೆಯ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರೆ, ಮತ್ತೆ ಕೆಲವರು ಪರೀಕ್ಷೆಯನ್ನು ಪುನಃ ನಡೆಸಲು ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ವಿವಿಧ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ಗುಂಪುಗಳು ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳು ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ. ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ 20 ವಿದ್ಯಾರ್ಥಿಗಳ ಗುಂಪು, NEET-UG ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ ಮತ್ತು ಸಿಬಿಐ ಅಥವಾ ಯಾವುದೇ ಸ್ವತಂತ್ರ ಸಂಸ್ಥೆಯಿಂದ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆ ಅಕ್ರಮಗಳ ಆರೋಪದ ಬಗ್ಗೆ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ಮೇ 5 ರಂದು ನಡೆದ ಪರೀಕ್ಷೆಯನ್ನು ಎದುರಿಸಿದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗುವುದರಿಂದ ನಡೆದಿರುವ ಪರೀಕ್ಷೆಗಳನ್ನು ರದ್ದುಗೊಳಿಸಬಾರದು ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಮೂಲಕ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.