ದೇಶ

ಜಮ್ಮು-ಕಾಶ್ಮೀರ: ಕಥುವಾ ಬಳಿ ಸೇನಾ ವಾಹನಗಳ ಮೇಲೆ ಉಗ್ರರ ದಾಳಿ, ಇಬ್ಬರು ಯೋಧರು ಗಾಯ

ಕಥುವಾದಿಂದ 150 ಕಿಲೋಮೀಟರ್ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದಲ್ಲಿ ಸೇನಾ ವಾಹನಗಳು ಗಸ್ತು ತಿರುಗುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರ: ಕಥುವಾ ಬಳಿ ಸೇನಾ ವಾಹನಗಳ ಮೇಲೆ ಉಗ್ರರ ದಾಳಿ, ಇಬ್ಬರು ಯೋಧರು ಗಾಯ
ಸಾಂದರ್ಭಿಕ ಚಿತ್ರ
Published On :

ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿಯಲ್ಲಿ ಸೇನಾ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಕನಿಷ್ಠ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಕಥುವಾದಿಂದ 150 ಕಿಲೋಮೀಟರ್ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದಲ್ಲಿ ಸೇನಾ ವಾಹನಗಳು ಗಸ್ತು ತಿರುಗುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಎನ್ ಕೌಂಟರ್ ನಡೆಯುತ್ತಿದೆ. ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ರವಾನಿಸಲಾಗಿದೆ. ಹೆಚ್ಚಿನ ವಿವರ ತಿಳಿದುಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.