ಹಿಂದೂ, ಹಿಂಸಾಚಾರದ ಹೇಳಿಕೆ: ರಾಹುಲ್ ಬೆನ್ನಿಗೆ ನಿಂತ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ!
ರಾಹುಲ್ ಗಾಂಧಿ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ನಾವು ರಾಹುಲ್ ಗಾಂಧಿ ಅವರ ಇಡೀ ಭಾಷಣವನ್ನು ಗಮನವಿಟ್ಟು ಕೇಳಿದ್ದೇವೆ. ಹಿಂದೂ ಧರ್ಮವು ಹಿಂಸೆಯನ್ನು ತಿರಸ್ಕರಿಸುತ್ತದೆ ಎಂದು ಅವರು ನಿಸ್ಸಂದಿಗ್ಧವಾಗಿ ಒತ್ತಿಹೇಳುತ್ತಾರೆ ಎಂದಿದ್ದಾರೆ.

ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿನ ತಮ್ಮ ಭಾಷಣದಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ದೇಶಾದ್ಯಂತ ಚರ್ಚೆಯಾಗುತ್ತಿದೆ.
ಈ ಮಧ್ಯೆ ಉತ್ತರಾಮ್ನಾಯ ಜ್ಯೋತಿಷ್ಪೀಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಕಾಂಗ್ರೆಸ್ ನಾಯಕ ಬೆಂಬಲಕ್ಕೆ ಧಾವಿಸಿದ್ದಾರೆ.

ಒಟಿಟಿಯಲ್ಲಿನ ಸಿನಿಮಾಗಳು, ವೆಬ್ ಸರಣಿಗಳನ್ನು ಪರಿಶೀಲಿಸಲು 'ಧರಮ್ ಸೆನ್ಸಾರ್ ಮಂಡಳಿ' ಸ್ಥಾಪನೆ: ಶಂಕರಾಚಾರ್ಯ
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣದ ಅಂಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪ್ರಧಾನಿ ಮೋದಿ ಇಡೀ ಹಿಂದೂ ಸಮುದಾಯವನ್ನು ಹಿಂಸಾಚಾರಕ್ಕೆ ತಳುಕುಹಾಕುವುದು ಗಂಭೀರವಾದ ವಿಷಯ ಎಂದು ಹೇಳಿದ್ದರು.
ರಾಹುಲ್ ಗಾಂಧಿ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ನಾವು ರಾಹುಲ್ ಗಾಂಧಿ ಅವರ ಇಡೀ ಭಾಷಣವನ್ನು ಗಮನವಿಟ್ಟು ಕೇಳಿದ್ದೇವೆ. ಹಿಂದೂ ಧರ್ಮವು ಹಿಂಸೆಯನ್ನು ತಿರಸ್ಕರಿಸುತ್ತದೆ ಎಂದು ಅವರು ನಿಸ್ಸಂದಿಗ್ಧವಾಗಿ ಒತ್ತಿಹೇಳುತ್ತಾರೆ, ”ಎಂದು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.
ರಾಹುಲ್ ಗಾಂಧಿ ಭಾಷಣದ ಆಯ್ದ ಪ್ರಸಾರವನ್ನಷ್ಟೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿ ಪ್ರಚಾರ ಮಾಡುತ್ತಿರುವುದನ್ನು ಮಠಾಧೀಶರು ಟೀಕಿಸಿದ್ದಾರೆ. ಸತ್ಯಗಳನ್ನು ತಿರುಚುವವರಿಗೆ ಉತ್ತರದಾಯಿತ್ವವನ್ನು ಅವಿಮುಕ್ತೇಶ್ವರಾನಂದ ಸರಸ್ವತಿ ಒತ್ತಾಯಿಸಿದ್ದಾರೆ.
"ಗಾಂಧಿ ಹೇಳಿಕೆಯ ಆಯ್ದ ತುಣುಕುಗಳನ್ನು ಮಾತ್ರ ಪ್ರಚಾರ ಮಾಡುವುದು ತಪ್ಪುದಾರಿಗೆಳೆಯುವ ಮತ್ತು ಅನೈತಿಕವಾಗಿದೆ" ಎಂದು ಅವರು ಟೀಕಿಸಿದ್ದಾರೆ. ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದೂ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



