ಅದಾನಿಗೆ ಬಿಗ್ ರಿಲೀಫ್: ಮುಂದ್ರಾ ಭೂಮಿ ಸರ್ಕಾರಕ್ಕೆ ಹೋಗಬೇಕಾಗಿಲ್ಲ; ಗುಜರಾತ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಅದಾನಿ ಸಂಸ್ಥೆಗೆ 231 ಎಕರೆ ಗೋಮಾಳ ಭೂಮಿ ಮಂಜೂರು ಮಾಡುವ ನಿರ್ಧಾರದ ವಿರುದ್ಧ ಕಚ್ ಜಿಲ್ಲೆಯ ನವಿನಾಲ್ ಗ್ರಾಮದ ನಿವಾಸಿಗಳು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸಿದ್ದರು.

ನವದೆಹಲಿ: ಮುಂದ್ರಾ ಬಂದರಿನ ಬಳಿ 2005 ರಲ್ಲಿ ಅದಾನಿ ಗ್ರೂಪ್ ಕಂಪನಿಗೆ ನೀಡಲಾದ ಸುಮಾರು 108 ಹೆಕ್ಟೇರ್ ಗೋಮಾಳ ಭೂಮಿಯನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಪುನರಾರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸುವ ಗುಜರಾತ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.
ಅದಾನಿ ಬಂದರು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರಿದ್ದ ನ್ಯಾಯ ಪೀಠ, ನ್ಯಾಯದ ಹಿತಾಸಕ್ತಿಯಿಂದ ಹೈಕೋರ್ಟ್ ಆದೇಶವನ್ನು ತಡೆಯುವ ಅಗತ್ಯವಿದೆ ಎಂದು ಹೇಳಿತು.
2005 ರಲ್ಲಿ ಅದಾನಿ ಗ್ರೂಪ್ ಕಂಪನಿಗೆ ನೀಡಲಾದ ಸುಮಾರು 108 ಹೆಕ್ಟೇರ್ ಗೋಮಾಳ ಭೂಮಿಯನ್ನು ಹಿಂಪಡೆಯುವುದಾಗಿ ಜುಲೈ 5 ರಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿತ್ತು. ಗುಜರಾತ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ ಅಫಿಡವಿಟ್ ಪರಿಗಣಿಸಿ ಕಾನೂನಿನ ಪ್ರಕಾರ, ಹಿಂದಕ್ಕೆ ಪಡೆಯುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಂಬಂಧಿಸಿದ ಪ್ರಾಧಿಕಾರ, ಅಧಿಕಾರಿಗಳು ನಮಗೆ ಅಗತ್ಯವಿದೆ ಎಂದು ಹೈಕೋರ್ಟ್ ಆದೇಶ ನೀಡಿ ಜುಲೈ 26 ಕ್ಕೆ ಪ್ರಕರಣವನ್ನು ಮುಂದೂಡಿತ್ತು.
ಅದಾನಿ ಸಂಸ್ಥೆಗೆ 231 ಎಕರೆ ಗೋಮಾಳ ಭೂಮಿ ಮಂಜೂರು ಮಾಡುವ ನಿರ್ಧಾರದ ವಿರುದ್ಧ ಕಚ್ ಜಿಲ್ಲೆಯ ನವಿನಾಲ್ ಗ್ರಾಮದ ನಿವಾಸಿಗಳು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



