ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್'ಗೆ ಇಡಿ ಸಮನ್ಸ್ ಜಾರಿ
ಫರ್ನಾಂಡೀಸ್‌ಗೆ ಉಡುಗೊರೆಗಳನ್ನು ಖರೀದಿಸಲು ಚಂದ್ರಶೇಖರ್ ಈ ಅಪರಾಧದ ಆದಾಯ ಅಥವಾ ಅಕ್ರಮ ಹಣವನ್ನು ಬಳಸಿದ್ದಾರೆ ಎಂದು ಇಡಿ ಆರೋಪಿಸಿದೆ.

ನವದೆಹಲಿ: ಸುಕೇಶ್ ಚಂದ್ರಶೇಖರ್ ಅವರ ಸುಮಾರು 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ವು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಫೋರ್ಟಿಸ್ ಹೆಲ್ತ್‌ಕೇರ್‌ನ ಮಾಜಿ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಸೇರಿದಂತೆ ಉನ್ನತ ವ್ಯಕ್ತಿಗಳಿಗೆ ಸುಮಾರು 200 ಕೋಟಿ ರೂ.ಗಳ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಈ ಪ್ರಕರಣದಲ್ಲಿ 38 ವರ್ಷದ ಶ್ರೀಲಂಕಾ ಮೂಲದ ಬಾಲಿವುಡ್ ನಟಿಯನ್ನು ಇಡಿ ಈ ಹಿಂದೆ ಪ್ರಶ್ನಿಸಿತ್ತು.
ಫರ್ನಾಂಡೀಸ್‌ಗೆ ಉಡುಗೊರೆಗಳನ್ನು ಖರೀದಿಸಲು ಚಂದ್ರಶೇಖರ್ ಈ ಅಪರಾಧದ ಆದಾಯ ಅಥವಾ ಅಕ್ರಮ ಹಣವನ್ನು ಬಳಸಿದ್ದಾರೆ ಎಂದು ಇಡಿ ಆರೋಪಿಸಿದೆ. 2022 ರಲ್ಲಿ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ ನಟ ಚಂದ್ರಶೇಖರ್ ಅವರು ನಾನು ನೀಡಿದ್ದ ಬೆಲೆಬಾಳುವ ವಸ್ತುಗಳು, ಆಭರಣಗಳು ಮತ್ತು ಬೆಲೆಬಾಳುವ ಉಡುಗೊರೆಗಳನ್ನು ಫರ್ನಾಂಡಿಸ್ ಆನಂದಿಸುತ್ತಿದ್ದಾರೆ ಎಂದು ಹೇಳಿದ್ದರು.
ಈ ಹಿಂದೆ ಈ ಪ್ರಕರಣದಲ್ಲಿ ಫರ್ನಾಂಡಿಸ್ ಅವರನ್ನು ಇಡಿ ಕನಿಷ್ಠ ಐದು ಬಾರಿ ಪ್ರಶ್ನಿಸಿತ್ತು. ನಟಿ ಯಾವಾಗಲೂ ತಾನು ನಿರಪರಾಧಿ ಮತ್ತು ಚಂದ್ರಶೇಖರ್ ಅವರ ಅಪರಾಧ ಚಟುವಟಿಕೆಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿಕೊಂಡು ಬರುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



