ನನ್ನ ಫೋನ್ ಹ್ಯಾಕ್ ಮಾಡಲಾಗಿದೆ, ಮಹಿಳಾ ನಾಯಕರ ಮೇಲೆ ಬಿಜೆಪಿ ಕಣ್ಣು: ಇಲ್ತಿಜಾ ಮುಫ್ತಿ ಆರೋಪ
"ನನ್ನ ಫೋನ್ ಅನ್ನು ಪೆಗಾಸಸ್ ಹ್ಯಾಕ್ ಮಾಡಿದೆ ಎಂದು ಆಪಲ್ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರ ತನ್ನನ್ನು ಟೀಕಿಸುವವರ ವಿರುದ್ಧ ಮತ್ತು ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು ಇದನ್ನು ಬಳಸುತ್ತಿದೆ".

ಶ್ರೀನಗರ: ಪಿಡಿಪಿ ಅಧ್ಯಕ್ಷೆ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮಗಳು ಹಾಗೂ ಅವರ ಮಾಧ್ಯಮ ಸಲಹೆಗಾರ್ತಿ ಇಲ್ತಿಜಾ ಮುಫ್ತಿ ಅವರು ತಮ್ಮ ಫೋನ್ ಅನ್ನು ಪೆಗಾಸಸ್ ಸ್ಪೈವೇರ್ ಹ್ಯಾಕ್ ಮಾಡಿದೆ ಎಂದು ಬುಧವಾರ ಆರೋಪಿಸಿದ್ದಾರೆ.
"ನನ್ನ ಫೋನ್ ಅನ್ನು ಪೆಗಾಸಸ್ ಹ್ಯಾಕ್ ಮಾಡಿದೆ ಎಂದು ಆಪಲ್ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರ ತನ್ನನ್ನು ಟೀಕಿಸುವವರ ವಿರುದ್ಧ ಮತ್ತು ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು ಇದನ್ನು ಬಳಸುತ್ತಿದೆ" ಎಂದು ಇಲ್ತಿಜಾ ಮುಫ್ತಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತೀಯ ಜನತಾ ಪಕ್ಷವು(ಬಿಜೆಪಿ) "ತಮಗೆ ಮಣಿಯದ" ಮಹಿಳಾ ನಾಯಕರ ಮೇಲೆ ಸ್ನೂಪ್ ಮಾಡುತ್ತಿದೆ ಎಂದು ಆರೋಪಿಸಿದ ಇಲ್ತಿಜಾ, "ಬಿಜೆಪಿ ನಾಚಿಕೆಯಿಲ್ಲದೆ ಮಹಿಳೆಯರ ಮೇಲೆ ಸ್ನೂಪ್ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇಸ್ರೇಲ್ ಮೂಲದ ಸೈಬರ್ ಸೆಕ್ಯುರಿಟಿ ಕಂಪನಿ NSO ಗ್ರೂಪ್ ಅಭಿವೃದ್ಧಿಪಡಿಸಿದ ಪೆಗಾಸ್ ಸ್ಪೈವೇರ್ WhatsApp ನಲ್ಲಿ ಮಿಸ್ ಕಾಲ್ ಕೊಡುವ ಮೂಲಕ ಮೊಬೈಲ್ ಫೋನ್ಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



