BMW ಹಿಟ್ ಅಂಡ್ ರನ್ ಕೇಸ್: ತಪ್ಪೊಪ್ಪಿಕೊಂಡ ಮಿಹಿರ್ ಶಾ, ಘಟನೆ ಮರುಸೃಷ್ಟಿಸಿದ ಮುಂಬೈ ಪೊಲೀಸರು
ಪ್ರಮುಖ ಆರೋಪಿ ಮಿಹಿರ್ ಶಾ ಮತ್ತು ಆತನ ಚಾಲಕ ರಾಜಋಷಿ ಬಿಡಾವತ್ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, "ಇಬ್ಬರೂ ಆರೋಪಿಗಳು ಅಪರಾಧದಲ್ಲಿ ತಮ್ಮ ಪಾತ್ರವನ್ನು ಒಪ್ಪಿಕೊಂಡಿದ್ದಾರೆ.

ಮುಂಬೈ: ಮುಂಬೈ ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ, ಅಪಘಾತದ ಸಮಯದಲ್ಲಿ ಕಾರನ್ನು ನಾನೇ ಓಡಿಸುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಆಕೆಯ ಪತಿ ಗಾಯಗೊಂಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಪ್ರಮುಖ ಆರೋಪಿ ಮಿಹಿರ್ ಶಾ ಮತ್ತು ಆತನ ಚಾಲಕ ರಾಜಋಷಿ ಬಿಡಾವತ್ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, "ಇಬ್ಬರೂ ಆರೋಪಿಗಳು ಅಪರಾಧದಲ್ಲಿ ತಮ್ಮ ಪಾತ್ರವನ್ನು ಒಪ್ಪಿಕೊಂಡಿದ್ದಾರೆ ಮತ್ತು ಪೊಲೀಸರು ಅಪಘಾತದ ದೃಶ್ಯವನ್ನು ಮರುಸೃಷ್ಟಿ ಮಾಡಿದರು.
ಸಿಜೆ ಹೌಸ್ ವರ್ಲಿಯಿಂದ ಸೀ ಲಿಂಕ್ ವರ್ಲಿಯವರೆಗೆ ಘಟನೆಯನ್ನು ಮರುಸೃಷ್ಟಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆಡಳಿತಾರೂಢ ಶಿವಸೇನೆ ನಾಯಕ ರಾಜೇಶ್ ಶಾ ಅವರ ಪುತ್ರ 24 ವರ್ಷದ ಮಿಹಿರ್ ಶಾ ಚಲಾಯಿಸುತ್ತಿದ್ದ ಕಾರು ಭಾನುವಾರ ಬೆಳಗ್ಗೆ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ಮಹಿಳೆ ಸಾವಿಗೀಡಾಗಿದ್ದರು. ನಂತರ ಮಿಹಿರ್ ಶಾ ತಲೆಮರೆಸಿಕೊಂಡಿದ್ದರು. ಆದರೆ ಮೂರು ದಿನಗಳ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಐಷಾರಾಮಿ ಕಾರಿನ ಟೈರ್ಗಳಲ್ಲಿ ಮಹಿಳೆ ಸಿಲುಕಿಕೊಂಡಿರುವುದು ಮಿಹಿರ್ ಶಾ ಗೊತ್ತಿತ್ತು. ಆದರೂ ಅವರು ಕಾರನ್ನು ನಿಲ್ಲಿಸದೆ ಚಾಲನೆ ಮಾಡಿದರು ಮತ್ತು ಇತರೆ ವಾಹನ ಚಾಲಕರು ಆಕ್ರೋಶಗೊಂಡು ಸಿಗ್ನಲ್ ಮಾಡಿ ಮತ್ತು ನಿಲ್ಲಿಸುವಂತೆ ಕೂಗಿ ಹೇಳಿದರೂ ಕಾರು ನಿಲ್ಲಿಸಲಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಜುಲೈ 16 ರವರೆಗೆ ಪೊಲೀಸ್ ಕಸ್ಟಡಿಯಲ್ಲಿರುವ 24 ವರ್ಷದ ಆರೋಪಿ ಮಿಹಿರ್ ಶಾ ತನ್ನ ಬಳಿ ಡ್ರೈವಿಂಗ್ ಲೈಸೆನ್ಸ್ ಇದೆ ಎಂದು ಹೇಳಿಕೊಂಡಿದ್ದಾನೆ. ಆದರೆ ಅದರ ದಾಖಲೆಯನ್ನು ಇನ್ನೂ ವಶಪಡಿಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



