ದೇಶ

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಕೇಂದ್ರ

ಭಾರತೀಯ ಆಡಳಿತ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪೂಜಾ ಖೇಡ್ಕರ್ ಅವರು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ.

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಕೇಂದ್ರ
ಪೂಜಾ ಖೇಡ್ಕರ್
Published On :

ನವದೆಹಲಿ: ಮಹಾರಾಷ್ಟ್ರದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ವಿರುದ್ಧದ ಆರೋಪಗಳ ತನಿಖೆಗೆ ಕೇಂದ್ರ ಸರ್ಕಾರ ಗುರುವಾರ ಏಕಸದಸ್ಯ ಸಮಿತಿ ರಚಿಸಿದೆ ಎಂದು ಮೂಲಗಳು ತಿಳಿಸಿವೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ಹೆಚ್ಚುವರಿ ಕಾರ್ಯದರ್ಶಿ ಈ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತೀಯ ಆಡಳಿತ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪೂಜಾ ಖೇಡ್ಕರ್ ಅವರು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಅಧಿಕಾರ ದುರುಪಯೋಗ ಆರೋಪದ ಮೇಲೆ ಪೂಜಾ ಖೇಡ್ಕರ್ ಅವರನ್ನು ಸೋಮವಾರ ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಲಾಗಿದ್ದು, ಇಂದು ವಿದರ್ಭ ಪ್ರದೇಶದ ವಾಶಿಮ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.