ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸ್ಫೋಟ, ಶೋಧ ಕಾರ್ಯಾಚರಣೆ!
ಬುಧವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ತಡರಾತ್ರಿ ಲಾಮ್ ಸೆಕ್ಟರ್‌ನಲ್ಲಿ ಎಲ್‌ಒಸಿಯಾದ್ಯಂತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ವರದಿಯಾಗಿದೆ. ಈ ಸಮಯದಲ್ಲಿ ಶೂನ್ಯ ರೇಖೆ ಸಮೀಪದಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ಧಕ್ಕೂ (ಎಲ್‌ಒಸಿ) ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಬುಧವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ತಡರಾತ್ರಿ ಲಾಮ್ ಸೆಕ್ಟರ್‌ನಲ್ಲಿ ಎಲ್‌ಒಸಿಯಾದ್ಯಂತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ವರದಿಯಾಗಿದೆ. ಈ ಸಮಯದಲ್ಲಿ ಶೂನ್ಯ ರೇಖೆ ಸಮೀಪದಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಗುರುವಾರ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬನನ್ನು ಸೇನಾ ಸಿಬ್ಬಂದಿ ಬಂಧಿಸಿದ್ದಾರೆ. ಫಗ್ವಾರಿ ಪ್ರದೇಶದಿಂದ ಬೆಳಗ್ಗೆ 11 ಗಂಟೆ ಸುಮಾರಿಗೆ ಆತನನ್ನು ಬಂಧಿಸಿ ಮುಂದಿನ ಕ್ರಮಕ್ಕಾಗಿ ಮಲಿಕ್‌ಪುರದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



