Lightning strikes: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವು
ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾ: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬಿಹಾರ ಮುಖ್ಯಮಂತ್ರಿ ಕಚೇರಿ ಶುಕ್ರವಾರ ನೀಡಿರುವ ಮಾಹಿತಿ ಅನ್ವಯ ಕಳೆದ 24 ಗಂಟೆಗಳಲ್ಲಿ ಬಿಹಾರದಾದ್ಯಂತ ಸಿಡಿಲು ಬಡಿತ-ಸಂಬಂಧಿತ ಘಟನೆಗಳಲ್ಲಿ ಒಟ್ಟು 21 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ ರೋಹ್ತಾಸ್, ಭೋಜ್‌ಪುರ, ಕೈಮೂರ್, ಸರನ್, ಜೆಹಾನಾಬಾದ್, ಗೋಪಾಲ್‌ಗಂಜ್, ಸುಪೌಲ್, ಲಖಿಸಾರೈ ಮತ್ತು ಮಾಧೇಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಿಡಿಲು ಬಡಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ಸಿಎಂಒ ಹೇಳಿಕೆಯಲ್ಲಿ ತಿಳಿಸಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇದೇ ವೇಳೆ ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಕಚೇರಿ ಜನರಿಗೆ ಮನವಿ ಮಾಡಿದೆ.
ಅಲ್ಲದೆ ಅಗತ್ಯವಿಲ್ಲದಿದ್ದರೆ ಹೊರಗಡೆ ಹೋಗುವುದನ್ನು ತಪ್ಪಿಸಿ ಮತ್ತು ಕಾಲಕಾಲಕ್ಕೆ ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಿ ಎಂದು ಕರೆ ನೀಡಿದೆ.
ಕಳೆದ ಕೆಲವು ವಾರಗಳಿಂದ ಬಿಹಾರದಲ್ಲಿ ಮಳೆ ಮತ್ತು ಭಾರಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ತಿಂಗಳ ಆರಂಭದಿಂದ ಸುಮಾರು 70 ಜನರು ಸಿಡಿಲು-ಸಂಬಂಧಿತ ಘಟನೆಗಳಿಗೆ ಬಲಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



