ಗುಜರಾತ್: ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಐಎಫ್‌ಎಸ್ ಅಧಿಕಾರಿ ಆತ್ಮಹತ್ಯೆ
ಐಎಫ್‌ಎಸ್ ಅಧಿಕಾರಿ ಆರ್‌ಎಂ ಪರ್ಮಾರ್(56) ಅವರು ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ದಾಹೋದ್: ಗುಜರಾತ್-ಕೇಡರ್ ನ ಭಾರತೀಯ ಅರಣ್ಯ ಸೇವೆಯ ಅಧಿಕಾರಿಯೊಬ್ಬರು ಶುಕ್ರವಾರ ಬೆಳಗ್ಗೆ ಗುಜರಾತ್‌ನ ದಾಹೋದ್ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಎಫ್‌ಎಸ್ ಅಧಿಕಾರಿ ಆರ್‌ಎಂ ಪರ್ಮಾರ್(56) ಅವರು ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದಾಹೋದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಅವರು ಹೇಳಿದ್ದಾರೆ.
"ಪರ್ಮಾರ್ ತಮ್ಮ ರಿವಾಲ್ವರ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಯಾವುದೇ ಆತ್ಮಹತ್ಯೆ ಟಿಪ್ಪಣಿಯನ್ನು ಬರೆದಿಲ್ಲ. ನಾವು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ ಮತ್ತು ಆತ್ಮಹತ್ಯೆಗೆ ಕಾರಣಗಳನ್ನು ಕಂಡುಹಿಡಿಯಲು ತನಿಖೆ ಪ್ರಾರಂಭಿಸಿದ್ದೇವೆ" ಎಂದು ಅಧಿಕಾರಿ ತಿಳಿಸಿದ್ದಾರೆ.
ಪರ್ಮಾರ್ ಅವರು ರೇಂಜ್ ಫಾರೆಸ್ಟ್ ಆಫೀಸರ್ ಆಗಿ ರಾಜ್ಯ ಅರಣ್ಯ ಸೇವೆಗೆ ಸೇರಿದ್ದರು ಮತ್ತು 2022 ರಲ್ಲಿ ಐಎಫ್‌ಎಸ್ ಅಧಿಕಾರಿಯಾಗಿ ಬಡ್ತಿ ಪಡೆದರು. ಪ್ರಸ್ತುತ ಅವರು ದಾಹೋದ್‌ನ ಸಾಮಾಜಿಕ ಅರಣ್ಯ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



