ಕೇರಳದಲ್ಲಿ ಭಾರೀ ಮಳೆ; 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ವರೆಗಿನ ಭಾರೀ ಮಳೆ ಮತ್ತು ಹಳದಿ ಅಲರ್ಟ್ ಎಂದರೆ 6 ಸೆಂ.ಮೀ ಮತ್ತು 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ.

ತಿರುವನಂತಪುರಂ: ಕೇರಳದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಶನಿವಾರ ದೇವರ ನಾಡಿನ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಐಎಂಡಿ ಕೇರಳದ ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್ ಮತ್ತು ರಾಜ್ಯದ ಇತರೆ ಒಂಬತ್ತು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯು ಪಥನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆ ಮತ್ತು ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಜುಲೈ 14 ರಿಂದ ಜುಲೈ 16 ರವರೆಗೆ ರಾಜ್ಯದ ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ವರೆಗಿನ ಭಾರೀ ಮಳೆ ಮತ್ತು ಹಳದಿ ಅಲರ್ಟ್ ಎಂದರೆ 6 ಸೆಂ.ಮೀ ಮತ್ತು 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ.
ಉತ್ತರ ಗುಜರಾತ್ ಮತ್ತು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ ಐದು ದಿನಗಳಲ್ಲಿ ಕೇರಳದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು IMD ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



