ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ತಾಯಿಗೆ ನೋಟಿಸ್ ಜಾರಿ
ಐಎಎಸ್ ಪ್ರೊಬೇಷನರ್ ಅಧಿಕಾರಿಯ ತಾಯಿ ಮನೋರಮಾ ಮತ್ತು ತಂದೆ ದಿಲೀಪ್ ಖೇಡ್ಕರ್ ಹಾಗೂ ಇತರ ಐವರ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪುಣೆ: ಮಹಾರಾಷ್ಟ್ರದ ವಿವಾದಿತ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರಿಗೆ ಪುಣೆ ಮಹಾನಗರ ಪಾಲಿಕೆ ಶನಿವಾರ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳಲ್ಲಿ ತಮ್ಮ ಬಂಗಲೆಯ ಗೋಡೆಯ ಪಕ್ಕದಲ್ಲಿರುವ "ಅನಧಿಕೃತ ಕಟ್ಟಡಗಳನ್ನು" ತೆರವುಗೊಳಿಸುವಂತೆ ಸೂಚಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭೂ ವಿವಾದಕ್ಕೆ ಸಂಬಂಧಿಸಿದಂತೆ ಮನೋರಮಾ ಅವರು ಕೆಲವು ವ್ಯಕ್ತಿಗಳಿಗೆ ಬಂದೂಕಿನಿಂದ ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಐಎಎಸ್ ಪ್ರೊಬೇಷನರ್ ಅಧಿಕಾರಿಯ ತಾಯಿ ಮನೋರಮಾ ಮತ್ತು ತಂದೆ ದಿಲೀಪ್ ಖೇಡ್ಕರ್ ಹಾಗೂ ಇತರ ಐವರ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇಂದು ಸಂಜೆ, ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ನಗರದ ಬ್ಯಾನರ್ ರಸ್ತೆಯಲ್ಲಿರುವ 'ಓಂ ದೀಪ್' ಬಂಗಲೆಯಲ್ಲಿ ಮನೋರಮಾ ಖೇಡ್ಕರ್ ಅವರಿಗೆ ನೋಟಿಸ್ ನೀಡಲು ಪ್ರಯತ್ನಿಸಿದರು. ಆದರೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅಧಿಕಾರಿಗಳು ಬಂಗಲೆಯ ಮುಖ್ಯ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ.
"ನಿಮ್ಮ ಬಂಗಲೆಯ ಹೊರಗೆ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡದಿಂದ ಜನರಿಗೆ ಅಡಚಣೆ ಉಂಟುಮಾಡುವ ಬಗ್ಗೆ ನಮಗೆ ದೂರು ಬಂದಿದೆ. ಮುಂದಿನ ಏಳು ದಿನಗಳಲ್ಲಿ ಬಂಗಲೆಯ ಗೋಡೆಯ ಪಕ್ಕದಲ್ಲಿರುವ ಅನಧಿಕೃತ ಕಟ್ಟಡಗಳನ್ನು ದಯವಿಟ್ಟು ತೆರವುಗೊಳಿಸಿ" ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
34 ವರ್ಷದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಸೈರನ್ ಹಾಗೂ ಸರ್ಕಾರಿ ಫಲಕ ಅಳವಡಿಸಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನಲ್ಲೇ ಅವರನ್ನು ಅಧಿಕಾರ ದುರುಪಯೋಗದ ಆರೋಪದ ಮೇಲೆ ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಲಾಗಿದೆ.
ಅಲ್ಲದೆ ಐಎಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪೂಜಾ ಖೇಡ್ಕರ್ ಅವರು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



