ದೇಶ

ಕಾವೇರಿ ನೀರು ಬಿಡುಗಡೆಗೆ ನಕಾರ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ರೈತರ ಪ್ರತಿಭಟನೆ!

ತಂಜಾವೂರಿನ ಜಿಲ್ಲಾಧಿಕಾರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತದ ನದಿ ಜೋಡಣೆ ರೈತ ಸಂಘದ ಸದಸ್ಯರು ಕೈಯಲ್ಲಿ ಖಾಲಿ ಮಣ್ಣಿನ ಮಡಿಕೆಗಳೊಂದಿಗೆ ಧರಣಿ ನಡೆಸಿದರು.

ಕಾವೇರಿ ನೀರು ಬಿಡುಗಡೆಗೆ ನಕಾರ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ರೈತರ ಪ್ರತಿಭಟನೆ!
ತಂಜಾವೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ರೈತರ ಪ್ರತಿಭಟನೆ
Published On :

ತಂಜಾವೂರು: ಜುಲೈ ಅಂತ್ಯದವರೆಗೆ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಕಾವೇರಿ ನದಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ಪಾಲನೆಗೆ ಕರ್ನಾಟಕ ಸರ್ಕಾರ ನಿರಾಕರಿಸಿರುವುದರಿಂದ ತಮಿಳುನಾಡಿನ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ತಂಜಾವೂರಿನ ಜಿಲ್ಲಾಧಿಕಾರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತದ ನದಿ ಜೋಡಣೆ ರೈತ ಸಂಘದ ಸದಸ್ಯರು ಕೈಯಲ್ಲಿ ಖಾಲಿ ಮಣ್ಣಿನ ಮಡಿಕೆಗಳೊಂದಿಗೆ ಧರಣಿ ನಡೆಸಿದರು. ನೀರು ಹಂಚಿಕೆಯಲ್ಲಿ ಸುಪ್ರೀಂಕೋರ್ಟ್ ಮತ್ತು CWRC ಆದೇಶದ ಬಗ್ಗೆ ಕರ್ನಾಟಕದ ಧೋರಣೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಸಿಡಬ್ಲ್ಯುಆರ್‌ಸಿ ಆದೇಶದಂತೆ ಕೂಡಲೇ ನೀರು ಬಿಡಬೇಕು, ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾಸಿಕ ವೇಳಾಪಟ್ಟಿಯಂತೆ ತಮಿಳುನಾಡಿಗೆ ನೀರು ಬಿಡಬೇಕು ಎಂದು ಅವರು ಒತ್ತಾಯಿಸಿದರು.

ತಮಿಳುನಾಡಿಗೆ ನೀರು ಬಿಡದ ಕಾರಣ ರೈತರು ಅನುಭವಿಸುತ್ತಿರುವ ನಷ್ಟಕ್ಕೆ ಕರ್ನಾಟಕ ಸರ್ಕಾರ ಪರಿಹಾರ ನೀಡಬೇಕು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ಗೆ ಮನವಿ ಮಾಡಿದರು. ಪ್ರತಿಭಟನಾ ನಿರತ ರೈತರೊಂದಿಗೆ ಜಿಲ್ಲಾಧಿಕಾರಿ ಮಾತುಕತೆ ನಡೆಸಿದ ಬಳಿಕ ಎರಡೂವರೆ ಗಂಟೆಗಳ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಯಿತುಯ

ಈ ಮಧ್ಯೆ ತಮಿಳುನಾಡು ರೈತ ಸಂಘದ ಸದಸ್ಯರು ತಂಜಾವೂರಿನ ಇರ್ವಿನ್ ಸೇತುವೆ ಬಳಿ ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. CWRC ಆದೇಶ ಪಾಲನೆ ನಿರಾಕರಿಸಿದ ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.