ಕಾಶ್ಮೀರ: ಮೂವರು ಉಗ್ರರ ಹತ್ಯೆ, ಗಡಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
ಪ್ರಸ್ತುತ ಕೆರಾನ್ ಸೆಕ್ಟರ್‌ನ ಎಲ್‌ಒಸಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ಹೇಳಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇರಾನ್ ಸೆಕ್ಟರ್‌ನಲ್ಲಿ ಭಾನುವಾರ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ, ಮೂವರು ಅಪರಿಚಿತ ಭಯೋತ್ಪಾದಕರು ಹತ್ಯೆ ಮಾಡಿದೆ.
ವರದಿಗಳ ಪ್ರಕಾರ, ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಸೇನೆ ಹೇಳಿದೆ.
"ಪ್ರಸ್ತುತ ಕೆರಾನ್ ಸೆಕ್ಟರ್‌ನ ಎಲ್‌ಒಸಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ" ಎಂದು ಶ್ರೀನಗರ ಮೂಲದ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



