ಬಾರಾಮತಿಯಿಂದ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಅಜಿತ್ ಪವಾರ್ ಚಾಲನೆ
ಮಹಾಯುತಿ ಮೈತ್ರಿಕೂಟ ಸರ್ಕಾರ ಮಹಿಳೆಯರಿಗೆ ನೀಡಿರುವ ಆರ್ಥಿಕ ನೆರವು ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಪ್ರಸ್ತಾಪಿಸಿ ಅಜಿತ್ ಪವಾರ್ ಅವರು ಮತಯಾಚಿಸಿದರು.

ಬಾರಾಮತಿ: ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾನುವಾರ ಶರದ್ ಪವಾರ್ ಅವರ ಭದ್ರಕೋಟೆಯಾದ ಬಾರಾಮತಿಯಿಂದ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ್ದಾರೆ.
ಇಂದು ಬಾರಾಮತಿಯಲ್ಲಿ ಮಹಾಯುತಿ ಮೈತ್ರಿಕೂಟ ಸರ್ಕಾರ ಮಹಿಳೆಯರಿಗೆ ನೀಡಿರುವ ಆರ್ಥಿಕ ನೆರವು ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಪ್ರಸ್ತಾಪಿಸಿ ಅಜಿತ್ ಪವಾರ್ ಅವರು ಮತಯಾಚಿಸಿದರು.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ನಂಬುವಂತೆ ಮತ್ತು ವಿರೋಧಿಗಳು ಹರಡುವ ಸಂವಿಧಾನ ಬದಲಾಯಿಸುವ ಪ್ರಯತ್ನಗಳು ಸೇರಿದಂತೆ ಇತರೆ ಯಾವುದೇ "ಸುಳ್ಳುಗಳನ್ನು" ನಂಬಬೇಡಿ ಎಂದು ಅಜಿತ್ ಪವಾರ್ ಕೇಳಿಕೊಂಡರು.
"ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ(ಅಕ್ಟೋಬರ್‌ನಲ್ಲಿ), ಕೆಲವರು ಸುಳ್ಳು ಸುದ್ದಿಗಳನ್ನು ಹರಡಲು ಪ್ರಯತ್ನಿಸುತ್ತಾರೆ. ಆದರೆ ಅದನ್ನು ನೀವು ನಂಬಬೇಡಿ. ನಾವು ಬದುಕಿರುವವರೆಗೆ ಯಾರೂ ಸಂವಿಧಾನವನ್ನು ಬದಲಾಯಿಸುವ ಧೈರ್ಯ ಮಾಡುವುದಿಲ್ಲ" ಎಂದು ಮಹಾ ಡಿಸಿಎಂ ಹೇಳಿದರು.
ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಅಜಿತ್ ಪವಾರ್ ಅವರು, ಇತ್ತೀಚೆಗೆ ಪ್ರಾರಂಭಿಸಲಾದ "ಮಝಿ ಲಡ್ಕಿ ಬಹಿನ್ ಯೋಜನೆ" ಯನ್ನು ಪ್ರಮುಖವಾಗಿ ಪ್ರಮುಖವಾಗಿ ಪ್ರಸ್ತಾಪಿಸಿದರು. ಇದು ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂಪಾಯಿಗಳ ಆರ್ಥಿಕ ಸಹಾಯ ಒದಗಿಸುವ ಗುರಿಯನ್ನು ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



