ಮಧ್ಯ ಪ್ರದೇಶದ 55 ಜಿಲ್ಲೆಗಳಲ್ಲಿ 'PM ಕಾಲೇಜ್ ಆಫ್ ಎಕ್ಸಲೆನ್ಸ್' ಉದ್ಘಾಟಿಸಿದ ಅಮಿತ್ ಶಾ
2047ರಲ್ಲಿ ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿದ್ದು, ಈ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ.

ಇಂದೋರ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಮಧ್ಯಪ್ರದೇಶದ ಎಲ್ಲಾ 55 ಜಿಲ್ಲೆಗಳಲ್ಲಿ 'ಪ್ರಧಾನ ಮಂತ್ರಿ ಕಾಲೇಜ್ ಆಫ್ ಎಕ್ಸಲೆನ್ಸ್' ಅನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು ಮತ್ತು 2047 ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯ ನಡುವೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುವಲ್ಲಿ ನರೇಂದ್ರ ಮೋದಿಯವರ ದೂರದೃಷ್ಟಿಯನ್ನು ಶ್ಲಾಘಿಸಿದರು.
ಇಂದು ಇಂದೋರ್ನ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ 55 'ಪಿಎಂ ಕಾಲೇಜ್ ಆಫ್ ಎಕ್ಸಲೆನ್ಸ್' ಉದ್ಘಾಟಿಸಿ ಮಾತನಾಡಿದ ಅಮಿ ಶಾ, ಇತರ ರಾಜ್ಯಗಳಿಗಿಂತ ಮೊದಲು ಎನ್ಇಪಿಯನ್ನು ಜಾರಿಗೆ ತಂದಿರುವ ಮಧ್ಯ ಪ್ರದೇಶವನ್ನು ಶ್ಲಾಘಿಸಿದರು.
2047ರಲ್ಲಿ ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿದ್ದು, ಈ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಎನ್ಇಪಿ ಅದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
"NEP ನಮ್ಮ ವಿದ್ಯಾರ್ಥಿಗಳನ್ನು ವಿಶ್ವದ ಜನರೊಂದಿಗೆ ಸಮನಾಗಿ ನಿಲ್ಲುವಂತೆ ಮಾಡುತ್ತದೆ ಮತ್ತು ದೇಶದ ಸಂಸ್ಕೃತಿಯನ್ನು ಒಂದುಗೂಡಿಸುತ್ತದೆ. ಇದು ಗುಣಮಟ್ಟದ ಮೇಲೆ ಕೇಂದ್ರೀಕೃತವಾಗಿದೆ ಎಂದು ಅಮಿತ್ ಶಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



