ಕೆನಡಾ ಮೂಲದ ಉಗ್ರ ಲಾಂಡಾ ಗುಂಪಿನ ಐವರು ಸಹಚರರ ಬಂಧನ
ಈ ಗ್ಯಾಂಗ್ ಪಂಜಾಬ್ನ ಹಲವು ಜಿಲ್ಲೆಗಳಲ್ಲಿ ಕೊಲೆ, ಸುಲಿಗೆ ಮತ್ತು ಅನೇಕ ಇತರ ಅಪರಾಧ ಚಟುವಟಿಕೆಗಳಂತಹ ಬಹು ಘೋರ ಅಪರಾಧಗಳಲ್ಲಿ ತೊಡಗಿದೆ

ಚಂಡೀಗಢ: ಕೆನಡಾ ಮೂಲದ ಉಗ್ರ ಲಖ್ಬೀರ್ ಸಿಂಗ್ ಅಲಿಯಾಸ್ ಲಾಂಡಾನ ಐವರು ಸಹಚರರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರಿಂದ ಮೂರು ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ತಿಳಿಸಿದ್ದಾರೆ.
"ಸಂಘಟಿತ ಅಪರಾಧದ ವಿರುದ್ಧದ ಕಾರ್ಯಾಚರಣೆಯಲ್ಲಿ ಜಲಂಧರ್ ಕಮಿಷನರೇಟ್ ಪೊಲೀಸರು ಕೆನಡಾ ಮೂಲದ ಭಯೋತ್ಪಾದಕ ಲಖ್ಬೀರ್ ಆಲಿಯಾಸ್ ಲಾಂಡಾನ ಐವರು ಸಹಚರರನ್ನು ಬಂಧಿಸಿದ್ದಾರೆ" ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತ ಲಾಂಡಾ ಗ್ಯಾಂಗ್ ಸದಸ್ಯರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಈ ಗ್ಯಾಂಗ್ ಪಂಜಾಬ್ನ ಹಲವು ಜಿಲ್ಲೆಗಳಲ್ಲಿ ಕೊಲೆ, ಸುಲಿಗೆ ಮತ್ತು ಅನೇಕ ಇತರ ಅಪರಾಧ ಚಟುವಟಿಕೆಗಳಂತಹ ಬಹು ಘೋರ ಅಪರಾಧಗಳಲ್ಲಿ ತೊಡಗಿದೆ" ಎಂದು ಯಾದವ್ ಹೇಳಿದ್ದಾರೆ. ಜೂನ್ 10 ರಂದು ಲಾಂಡಾದ ಮೂವರು ಸಹಚರರನ್ನು, ಜೂನ್ 30 ರಂದು ಐವರು ಸಹಚರರನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



