ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಗೌರವ್ ಗೊಗೊಯ್ ನೇಮಕ
ಈ ಸಂಬಂಧ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪ ನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಲಾಗಿದೆ.
ಈ ಸಂಬಂಧ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪ ನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಗೊಗೊಯ್ ಲೋಕಸಭೆಯಲ್ಲಿ ಪಕ್ಷದ ಉಪ ನಾಯಕರಾಗಿದ್ದರೆ, ಕೇರಳದಿಂದ ಎಂಟು ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಪಕ್ಷದ ಮುಖ್ಯ ಸಚೇತಕರಾಗಿರುತ್ತಾರೆ. ವಿರುದುನಗರ ಸಂಸದ ಮಾಣಿಕ್ಕಂ ಟ್ಯಾಗೋರ್ ಮತ್ತು ಕಿಶನ್ಗಂಜ್ ಸಂಸದ ಮೊಹಮ್ಮದ್ ಜಾವೇದ್ ಲೋಕಸಭೆಯಲ್ಲಿ ಪಕ್ಷದ ವಿಪ್ ಆಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಪಕ್ಷವು ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಹೆಸರಿಸಿದ ನಂತರ ಅವರನ್ನು ಆ ಸ್ಥಾನಕ್ಕೆ ನೇಮಿಸಲಾಯಿತು. ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಮತ್ತು India ಮೈತ್ರಿಕೂಟ ಪಕ್ಷಗಳು ಲೋಕಸಭೆಯಲ್ಲಿ ಜನರ ಸಮಸ್ಯೆಗಳಿಗೆ ಶಕ್ತಿಯುತವಾಗಿ ಹೋರಾಡುತ್ತವೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



