ದೇಶ

ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಬಲ 86ಕ್ಕೆ ಕುಸಿತ

ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ಅವರು ಶನಿವಾರ ನಿವೃತ್ತರಾದ ನಾಲ್ವರು ನಾಮನಿರ್ದೇಶಿತ ಸದಸ್ಯರು. ಪ್ರಸ್ತುತ ಮೇಲ್ಮನೆಯಲ್ಲಿ 19 ಸ್ಥಾನಗಳು ಖಾಲಿ ಇವೆ.

ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಬಲ 86ಕ್ಕೆ ಕುಸಿತ
ರಾಜ್ಯಸಭೆ
Published On :

ನವದೆಹಲಿ: ರಾಜ್ಯಸಭೆಯಲ್ಲಿ ಬಿಜೆಪಿಯ ಭಾಗವಾಗಿದ್ದ ನಾಲ್ವರು ನಾಮನಿರ್ದೇಶಿತ ಸದಸ್ಯರು ಶನಿವಾರ ನಿವೃತ್ತಿಯಾದ ಬಳಿಕ ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯ ಬಲ 86ಕ್ಕೆ ಹಾಗೂ ಎನ್‌ಡಿಎ ಸದಸ್ಯ ಬಲ 101 ಕ್ಕೆ ಕುಸಿದಿದೆ. ಇದು 245 ಸದಸ್ಯ ಬಲದ ಸದನದಲ್ಲಿ ಬಹುಮತಕ್ಕೆ ಬೇಕಿರುವ 113 ಸದಸ್ಯ ಬಲಕ್ಕಿಂತ ಕಡಿಮೆ ಆಗಿದೆ.

ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ಅವರು ಶನಿವಾರ ನಿವೃತ್ತರಾದ ನಾಲ್ವರು ನಾಮನಿರ್ದೇಶಿತ ಸದಸ್ಯರು. ಪ್ರಸ್ತುತ ಮೇಲ್ಮನೆಯಲ್ಲಿ 19 ಸ್ಥಾನಗಳು ಖಾಲಿ ಇವೆ.

ಪ್ರಸ್ತುತ ರಾಜ್ಯಸಭೆಯ ಸದಸ್ಯ ಬಲ 225. ಹೀಗಾಗಿ ಮುಂಬರುವ ಬಜೆಟ್ ಅಧಿವೇಶನದಲ್ಲಿ ಎನ್‌ಡಿಎ ಮಸೂದೆ ಪಾಸು ಮಾಡುವಂತಹ ಸಂದರ್ಭ ಬಂದರೆ ಯಾವ ಮೈತ್ರಿಕೂಟಕ್ಕೂ ಸೇರದ ಏಳು ನಾಮನಿರ್ದೇಶಿತ ಸದಸ್ಯರು, ಇಬ್ಬರು ಪಕ್ಷೇತರರು ಮತ್ತು ಆಪ್ತ ಪಕ್ಷಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟದ ಸದಸ್ಯರ ಸಂಖ್ಯೆ 87 ಇದೆ. ಇದರಲ್ಲಿ ಕಾಂಗ್ರೆಸ್ ನ 26, ಟಿಎಂಸಿಯ 13, ಎಎಪಿ ಮತ್ತು ಡಿಎಂಕೆ ತಲಾ 10 ಸದಸ್ಯರನ್ನು ಹೊಂದಿದೆ. ಬಿಜೆಪಿ ಅಥವಾ ಕಾಂಗ್ರೆಸ್ ಸೇರದ ಬಿಆರ್ ಎಸ್ ನಂತಹ ಮತ್ತಿತರ ಪಕ್ಷಗಳ ನಾಮನಿರ್ದೇಶಿತ ಸದಸ್ಯರು ಮತ್ತು ಪಕ್ಷೇತರರು ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.