ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರನ ಬಂಧನ
ಹೈದರಾಬಾದ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಅವರಿಂದ 35 ಲಕ್ಷ ರೂಪಾಯಿ ಮೌಲ್ಯದ ಸುಮಾರು 200 ಗ್ರಾಂ ಕೊಕೇನ್ ವಶಪಡಿಸಿಕೊಂಡಿದ್ದಾರೆ.

ಹೈದರಾಬಾದ್: ಅಂತಾರಾಷ್ಟ್ರೀಯ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ ಪ್ರೀತ್ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಇಂದು ಹೈದರಾಬಾದ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಅವರಿಂದ 35 ಲಕ್ಷ ರೂಪಾಯಿ ಮೌಲ್ಯದ ಸುಮಾರು 200 ಗ್ರಾಂ ಕೊಕೇನ್ ವಶಪಡಿಸಿಕೊಂಡಿದ್ದಾರೆ.
ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಅಮನ್ ಪ್ರೀತ್ ಅವರನ್ನು ಬಂಧಿಸಲಾಗಿದೆ. ಅವರು ಡ್ರಗ್ ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಹೈದರಾಬಾದ್ ಪೊಲೀಸರು ಖಚಿತಪಡಿಸಿದ್ದಾರೆ.
ಬಂಧಿತ ಪೆಡ್ಲರ್ ಗಳು ನೈಜೀರಿಯಾದಿಂದ ಡ್ರಗ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಶಂಶಾಬಾದ್ ಉಪ ಪೊಲೀಸ್ ಆಯುಕ್ತ ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಈ ಹಿಂದೆ 2020ರಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಕುಲ್ ಪ್ರೀತ್ ಸಿಂಗ್ ಅವರಿಗೆ ಎನ್ ಸಿಬಿ ನೀಡಿತ್ತು ಮತ್ತು ಅವರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



