ವಿಚ್ಛೇದನ ಬಯಸಿ ಒಮರ್ ಅಬ್ದುಲ್ಲಾ ಅರ್ಜಿ: ಪಾಯಲ್ ಅಬ್ದುಲ್ಲಾಗೆ ಸುಪ್ರೀಂ ಕೋರ್ಟ್ ನೋಟಿಸ್
ಒಮರ್ ಅಬ್ದುಲ್ಲಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಕಳೆದ 15 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವುದರಿಂದ ವಿವಾಹವು 'ಸತ್ತಿದೆ' ಎಂದು ಹೇಳಿದರು.

ನವದೆಹಲಿ: ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನ ಬಯಸಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ಸೋಮವಾರ ಅವರ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ಪ್ರತಿಕ್ರಿಯೆ ಕೇಳಿದೆ.
ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯ ಪೀಠ, ಪಾಯಲ್ ಅಬ್ದುಲ್ಲಾ ಅವರಿಗೆ ನೋಟಿಸ್ ಜಾರಿಗೊಳಿಸಿದ್ದು, ಆರು ವಾರಗಳಲ್ಲಿ ಪ್ರತಿಕ್ರಿಯೆಯನ್ನು ಕೇಳಿದೆ. ಆರಂಭದಲ್ಲಿ, ಒಮರ್ ಅಬ್ದುಲ್ಲಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಕಳೆದ 15 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವುದರಿಂದ ವಿವಾಹವು 'ಸತ್ತಿದೆ' ಎಂದು ಹೇಳಿದರು.
ಡಿಸೆಂಬರ್ 12, 2023 ರಂದು ಒಮರ್ ಅಬ್ದುಲ್ಲಾ ವಿಚ್ಛೇದನ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಮಾಜಿ ಮುಖ್ಯಮಂತ್ರಿ ಅಬ್ದುಲ್ಲಾ ವಿಚ್ಚೇದನಕ್ಕೆ ಅನುಮತಿ ನೀಡಲು ನಿರಾಕರಿಸಿದ 2016 ರ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



