ನೀತಿ ಆಯೋಗ ಮರು ರಚನೆ: 15 ಸಚಿವರು, ಬಿಜೆಪಿ ಮಿತ್ರಪಕ್ಷಗಳು ಸೇರ್ಪಡೆ
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿ ಉಳಿದಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಥಶಾಸ್ತ್ರಜ್ಞ ಸುಮನ್ ಕೆ ಬೆರಿ ಅವರು ನೀತಿ ಆಯೋಗದ ಉಪಾಧ್ಯಕ್ಷರಾಗಿ ಮುಂದುವರಿಯುತ್ತಾರೆ.

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ-3.0 ನೀತಿ ಆಯೋಗವನ್ನು ಪುನರ್ ರಚಿಸಿದ್ದು, ನಾಲ್ಕು ಪೂರ್ಣಾವಧಿ ಸದಸ್ಯರು ಮತ್ತು ಬಿಜೆಪಿ ಮಿತ್ರಪಕ್ಷಗಳು ಸೇರಿದಂತೆ 15 ಕೇಂದ್ರ ಸಚಿವರನ್ನು ಪದನಿಮಿತ್ತ ಸದಸ್ಯರು ಅಥವಾ ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿ ಉಳಿದಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಥಶಾಸ್ತ್ರಜ್ಞ ಸುಮನ್ ಕೆ ಬೆರಿ ಅವರು ನೀತಿ ಆಯೋಗದ ಉಪಾಧ್ಯಕ್ಷರಾಗಿ ಮುಂದುವರಿಯುತ್ತಾರೆ.
ವಿಜ್ಞಾನಿ ವಿ ಕೆ ಸಾರಸ್ವತ್, ಕೃಷಿ ಅರ್ಥಶಾಸ್ತ್ರಜ್ಞ ರಮೇಶ್ ಚಂದ್, ಮಕ್ಕಳ ತಜ್ಞ ವಿ ಕೆ ಪಾಲ್ ಮತ್ತು ಮ್ಯಾಕ್ರೋ-ಎಕನಾಮಿಸ್ಟ್ ಅರವಿಂದ ವೀರಮಾನಿ ಅವರು ಸರ್ಕಾರದ ಚಿಂತಕರ ಚಾವಡಿಯ ಪೂರ್ಣಾವಧಿ ಸದಸ್ಯರಾಗಿ ಮುಂದುವರಿಯಲಿದ್ದಾರೆ.
ನಾಲ್ವರು ಪದನಿಮಿತ್ತ ಸದಸ್ಯರು ರಾಜನಾಥ್ ಸಿಂಗ್ (ರಕ್ಷಣಾ ಖಾತೆ ಸಚಿವ ), ಅಮಿತ್ ಶಾ (ಗೃಹ ಖಾತೆ ಸಚಿವ), ಶಿವರಾಜ್ ಸಿಂಗ್ ಚೌಹಾಣ್ (ಕೃಷಿ ಖಾತೆ ) ಮತ್ತು ನಿರ್ಮಲಾ ಸೀತಾರಾಮನ್ (ಹಣಕಾಸು ಖಾತೆ).
ನೀತಿ ಆಯೋಗದ ಪರಿಷ್ಕೃತ ಸಂಯೋಜನೆಯನ್ನು ಪ್ರಧಾನಿ ಅನುಮೋದಿಸಿದ್ದಾರೆ ಎಂದು ಅಧಿಸೂಚನೆ ತಿಳಿಸಿದೆ. ಪುನರ್ ರಚಿಸಲಾದ ನೀತಿ ಆಯೋಗದ ವಿಶೇಷ ಆಹ್ವಾನಿತರು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ (ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು ಖಾತೆ ಸಚಿವರು), ಜಗತ್ ಪ್ರಕಾಶ್ ನಡ್ಡಾ (ಆರೋಗ್ಯ ಇಲಾಖೆ ಸಚಿವರು) ಒಳಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



