ಹರಿಯಾಣದಲ್ಲಿ AAP ಏಕಾಂಗಿಯಾಗಿ ಸ್ಪರ್ಧೆ, ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲೂ ಕಣಕ್ಕೆ
ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಖಾತರಿಗಳನ್ನು ಜುಲೈ 20 ರಂದು ಪ್ರಕಟಿಸುವುದಾಗಿ ಎಎಪಿ ತಿಳಿಸಿದೆ.

ಚಂಡೀಗಢ: ಹರಿಯಾಣದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಜನ ಬದಲಾವಣೆ ಬಯಸುತ್ತಿರುವ ಹರಿಯಾಣದ ಎಲ್ಲಾ 90 ಸ್ಥಾನಗಳಲ್ಲೂ ಸ್ಪರ್ಧಿಸುವುದಾಗಿ ಗುರುವಾರ ಹೇಳಿದೆ.
ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಖಾತರಿಗಳನ್ನು ಜುಲೈ 20 ರಂದು ಪ್ರಕಟಿಸುವುದಾಗಿ ಎಎಪಿ ತಿಳಿಸಿದೆ. ಈ ವರ್ಷದ ಕೊನೆಯಲ್ಲಿ ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಆಪ್ ಹಿರಿಯ ನಾಯಕರಾದ ಸಂದೀಪ್ ಪಾಠಕ್ ಮತ್ತು ಅನುರಾಗ್ ಧಂಡಾ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸುಶೀಲ್ ಗುಪ್ತಾ ಅವರೊಂದಿಗೆ
ಇಂದು ಚಂಡೀಗಢದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಎಎಪಿ ನಾಯಕ ಸಂಜಯ್ ಸಿಂಗ್, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪ್ರಬಲವಾಗಿ ಹೋರಾಡಲಿದೆ ಮತ್ತು ಎಲ್ಲಾ 90 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ" ಎಂದರು.
ಹರಿಯಾಣದಲ್ಲಿ ಎಎಪಿ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರೂ, ಅದು ಇನ್ನೂ ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಿಲ್ಲ.
ಎಎಪಿ ತನ್ನ ಇಂಡಿಯಾ ಬ್ಲಾಕ್ ಪಾಲುದಾರ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಕಾಂಗ್ರೆಸ್ ಸ್ಪರ್ಧಿಸಿದ ಒಂಬತ್ತು ಲೋಕಸಭಾ ಸ್ಥಾನಗಳಲ್ಲಿ ಐದರಲ್ಲಿ ಗೆದ್ದರೆ, ಎಎಪಿ ಕುರುಕ್ಷೇತ್ರದಲ್ಲಿ ಸೋಲು ಅನುಭವಿಸಿತ್ತು.
ಭೂಪಿಂದರ್ ಸಿಂಗ್ ಹೂಡಾ ಮತ್ತು ಉದಯ್ ಭಾನ್ ಸೇರಿದಂತೆ ಹರಿಯಾಣ ಕಾಂಗ್ರೆಸ್ ನಾಯಕರು ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವಸುಳಿವು ನೀಡಿದ್ದು, ಇಬ್ಬರೂ ಎಲ್ಲಾ 90 ಸ್ಥಾನಗಳಿಗೂ ಅಭ್ಟರ್ಥಿಗಳನ್ನು ಕಣಕ್ಕಿಳಿಸುವ ಸಾಮರ್ಥ್ಯವನ್ನು ಪಕ್ಷ ಹೊಂದಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



