ದೇಶ

NEET-UG ಪೇಪರ್ ಸೋರಿಕೆ: ಸಿಬಿಐಯಿಂದ ಪಾಟ್ನಾ ಏಮ್ಸ್ ನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳ ಬಂಧನ

ಚಂದನ್ ಸಿಂಗ್, ರಾಹುಲ್ ಅನಂತ್ ಮತ್ತು ಕುಮಾರ್ ಶಾನು ಹಾಗೂ ಎರಡನೇ ವರ್ಷದ ವಿದ್ಯಾರ್ಥಿ - ಕರಣ್ ಜೈನ್ ಅವರನ್ನು ತೀವ್ರ ವಿಚಾರಣೆಯ ನಂತರ ಸಿಬಿಐ ಬಂಧಿಸಿದೆ.

NEET-UG ಪೇಪರ್ ಸೋರಿಕೆ: ಸಿಬಿಐಯಿಂದ ಪಾಟ್ನಾ ಏಮ್ಸ್ ನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳ ಬಂಧನ
NEET-UG ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
Published On :

ನವದೆಹಲಿ: ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗುರುವಾರ ಪಾಟ್ನಾದ ಏಮ್ಸ್‌ನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಂಬಿಬಿಎಸ್ ಮೂರನೇ ವರ್ಷದ ಮೂವರು ವಿದ್ಯಾರ್ಥಿಗಳು - ಚಂದನ್ ಸಿಂಗ್, ರಾಹುಲ್ ಅನಂತ್ ಮತ್ತು ಕುಮಾರ್ ಶಾನು ಹಾಗೂ ಎರಡನೇ ವರ್ಷದ ವಿದ್ಯಾರ್ಥಿ - ಕರಣ್ ಜೈನ್ ಅವರನ್ನು ತೀವ್ರ ವಿಚಾರಣೆಯ ನಂತರ ಸಿಬಿಐ ಬಂಧಿಸಿದೆ ಎಂದು ಅವರು ಹೇಳಿದ್ದಾರೆ.

ಏಮ್ಸ್‌ನ ಹಿರಿಯ ಅಧ್ಯಾಪಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳನ್ನು ಬುಧವಾರ ಹಾಸ್ಟೆಲ್ ಕೊಠಡಿಗಳಿಂದ ಕರೆದೊಯ್ಯಲಾಗಿತ್ತು ಮತ್ತು ತನಿಖೆಗೆ ಒಳಪಡಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ತಿಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ವಿದ್ಯಾರ್ಥಿಗಳ ಹಾಸ್ಟೆಲ್ ಕೊಠಡಿಗಳನ್ನು ಸೀಲ್ ಮಾಡಿದೆ. ಸಿಬಿಐ ನಾಲ್ವರು ವಿದ್ಯಾರ್ಥಿಗಳನ್ನು ಕರೆದೊಯ್ದಿದೆ ಎಂದು ಏಮ್ಸ್ ಪಾಟ್ನಾ ನಿರ್ದೇಶಕ ಜಿ ಕೆ ಪಾಲ್ ಅವರು ಹೇಳಿದ್ದಾರೆ.

ಡೀನ್, ಹಾಸ್ಟೆಲ್ ವಾರ್ಡನ್ ಮತ್ತು ಒಎಸ್‌ಡಿ ಅವರ ಸಮ್ಮುಖದಲ್ಲಿ ಸಿಬಿಐ ಅಧಿಕಾರಿಗಳ ತಂಡ ವಿದ್ಯಾರ್ಥಿಗಳನ್ನು ಕರೆದೊಯ್ದಿದೆ ಎಂದು ನಿರ್ದೇಶಕ ಪಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.