ದೇಶ

ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಬೇಟೆ: ಕುಪ್ವಾರದಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರು ಹತ್ಯೆ

ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಿದ್ದರು.

ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಬೇಟೆ: ಕುಪ್ವಾರದಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರು ಹತ್ಯೆ
ಭದ್ರತಾ ಸಿಬ್ಬಂದಿ — PTI
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಆದರೆ ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುತ್ತಿದ್ದ ಕೆಲವು ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಿದ್ದರು. ಗಡಿ ನಿಯಂತ್ರಣ ರೇಖೆಯಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ 6 ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಗೆ ಗುಪ್ತಚರ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಮತ್ತೊಂದೆಡೆ, ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಮತ್ತೊಂದು ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಜಿಲ್ಲೆಯ ಕಸ್ತಿಗಢ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದೆ.

ಇದಕ್ಕೂ ಮುನ್ನ ಜುಲೈ 14ರಂದು ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ್ದು ಮೂವರು ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದರು. ಜುಲೈ 16 ರಂದು, ದೋಡಾ ಜಿಲ್ಲೆಯ ಭಾಟಾ ದೇಸಾ ಪ್ರದೇಶದಲ್ಲಿ ಭಯೋತ್ಪಾದಕರು ಹೊಂಚುದಾಳಿ ನಡೆಸಿದ್ದರು. ಇದರಲ್ಲಿ ನಾಲ್ವರು ಯೋಧರು ಮತ್ತು ಸ್ಥಳೀಯ ಪೋಲೀಸ್ ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.