ಜಗನ್ ರೆಡ್ಡಿ ಪಕ್ಷದ ಯುವ ನಾಯಕನನ್ನು ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಬರ್ಬರ ಹತ್ಯೆ
ಪಳನಾಡು ಜಿಲ್ಲೆಯಲ್ಲಿ ರಸ್ತೆ ಮಧ್ಯೆಯೇ ದಾಳಿಕೋರರು ಈ ಕೃತ್ಯ ಎಸಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ. ಯುವ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ ನಡೆಸುತ್ತಿದ್ದರೆ ಜನರು ಮಾತ್ರ ನೋಡುತ್ತಾ ನಿಂತಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಯುವ ನಾಯಕನನ್ನು ಬುಧವಾರ ರಾತ್ರಿ ಇರಿದು ಹತ್ಯೆ ಮಾಡಲಾಗಿದೆ. ಪಳನಾಡು ಜಿಲ್ಲೆಯಲ್ಲಿ ರಸ್ತೆ ಮಧ್ಯೆಯೇ ದಾಳಿಕೋರರು ಈ ಕೃತ್ಯ ಎಸಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ. ಯುವ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ ನಡೆಸುತ್ತಿದ್ದರೆ ಜನರು ಮಾತ್ರ ನೋಡುತ್ತಾ ನಿಂತಿದ್ದಾರೆ.
ಕೊಲೆಯಾದ ಯುವ ಮುಖಂಡನನ್ನು ರಶೀದ್ ಎಂದು ಗುರುತಿಸಲಾಗಿದೆ. ದಾಳಿಯ ನಂತರ ರಶೀದ್ ರಕ್ತದ ಮಡುವಿನಲ್ಲಿ ನೆಲದ ಮೇಲೆ ಬಿದ್ದಿದ್ದನು. ಎರಡೂ ಕೈಗಳಿಗೂ ಮಾರಣಾಂತಿಕ ಗಾಯವಾಗಿದ್ದು ಕುತ್ತಿಗೆಯ ಮೇಲೆ ಆಳವಾದ ಇರಿತವಾಗಿದೆ ಎಂದು ಮೂಲಗಳು ತಿಳಿಸಿವೆ. ರಶೀದ್ ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪಾಲನಾಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಂಚಿ ಶ್ರೀನಿವಾಸ ರಾವ್ ಅವರು, ಪ್ರಸ್ತುತ ವೈಯಕ್ತಿಕ ದ್ವೇಷವೇ ಈ ಕೊಲೆಗೆ ಕಾರಣ ಇರಬಹುದು. ಈ ಘಟನೆಯಲ್ಲಿ ಯಾವುದೇ ಪಕ್ಷಕ್ಕೆ ಸಂಬಂಧವಿಲ್ಲ ಎಂದರು. ಇದು ಪರಸ್ಪರ ಪೈಪೋಟಿಯ ವಿಷಯವಾಗಿದೆ ಎಂದರು.
ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನತೆ ಉಂಟುಮಾಡುವ ಅಥವಾ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ವಿಚಾರದಲ್ಲಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



