ರಷ್ಯಾ ಸೇನೆಯಲ್ಲಿರುವ 50 ಭಾರತೀಯರು ಶೀಘ್ರದಲ್ಲಿಯೇ ಬಿಡುಗಡೆ: MEA
ರಷ್ಯಾ ಸೇನೆಯಿಂದ ಬಿಡುಗಡೆಯಾಗಲು ಬಯಸುವ 50 ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಕುಟುಂಬಸ್ಥರು ಕೂಡಾ ನಮ್ಮನ್ನು ಭೇಟಿಯಾಗಿದ್ದಾರೆ. ಈ ನಿರ್ದಿಷ್ಟ ಸಮಸ್ಯೆಯನ್ನು ನಾಯಕತ್ವದ ಮಟ್ಟ ಸೇರಿದಂತೆ ಎಲ್ಲಾ ಹಂತಗಳಲ್ಲಿ ಎತ್ತಿದ್ದೇವೆ ಎಂದು ಅವರು ಹೇಳಿದರು.

ನವದೆಹಲಿ: ರಷ್ಯಾದ ಸೇನೆಯಿಂದ ಬಿಡುಗಡೆಯಾಗಲು ಬಯಸಿರುವ ಕನಿಷ್ಠ 50 ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ.
"ಪ್ರಧಾನಿ ಮೋದಿ ಅವರು ಇತ್ತೀಚಿನ ರಷ್ಯಾ ಭೇಟಿಯ ಸಂದರ್ಭದಲ್ಲಿ ಅಧ್ಯಕ್ಷ ಪುಟಿನ್ ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ನಮ್ಮ ಮನವಿಗೆ ರಷ್ಯಾದ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಉಭಯ ದೇಶಗಳು ಭಾರತೀಯ ಪ್ರಜೆಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಶ್ರಮಿಸುತ್ತಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಹಿಂತಿರುಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಷ್ಯಾ ಸೇವೆಯಿಂದ ಬಿಡುಗಡೆಯಾಗಲು ಬಯಸುವ 50 ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಕುಟುಂಬಸ್ಥರು ಕೂಡಾ ನಮ್ಮನ್ನು ಭೇಟಿಯಾಗಿದ್ದಾರೆ. ಈ ನಿರ್ದಿಷ್ಟ ಸಮಸ್ಯೆಯನ್ನು ನಾಯಕತ್ವದ ಮಟ್ಟ ಸೇರಿದಂತೆ ಎಲ್ಲಾ ಹಂತಗಳಲ್ಲಿ ಎತ್ತಿದ್ದೇವೆ ಎಂದು ಅವರು ಹೇಳಿದರು.
ಪ್ರಧಾನಿ ಮೋದಿ ಇತ್ತೀಚಿಗೆ ರಷ್ಯಾದ ಅಧ್ಯಕ್ಷರೊಂದಿಗಿನ ಭೇಟಿಯ ಸಂದರ್ಭದಲ್ಲಿ ರಷ್ಯಾ ಸೇನೆಯಲ್ಲಿ ಭಾರತೀಯ ನಾಗರಿಕ ರ ನೇಮಕಾತಿ ವಿಷಯ ಕುರಿತು ಬಲವಾದ ನಿಲುವು ತಳೆದಿದ್ದರು. ರಷ್ಯಾ ಕೂಡಾ ಭಾರತೀಯರನ್ನು ಶೀಘ್ರದಲ್ಲಿಯೇ ಸೇನೆಯಿಂದ ಬಿಡುಗಡೆ ಮಾಡುವುದಾಗಿ ಹೇಳಿರುವುದಾಗಿ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಕಳೆದ ವಾರ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



